ಮಹಾರಾಷ್ಟ್ರ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; 6 ಮಂದಿ ಸಾವು, 10 ಜನರಿಗೆ ಗಾಯ

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಮೃತಪಟ್ಟು, 10 ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಬುಲ್ಲಾನಾ ಜಿಲ್ಲೆಯ ಪುಣೆ-ನಾಗುರ ಹೆದ್ದಾರಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮುಂಬಯಿ: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಮೃತಪಟ್ಟು, 10 ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಬುಲ್ಲಾನಾ ಜಿಲ್ಲೆಯ ಪುಣೆ-ನಾಗ್ಪುರ ಹೆದ್ದಾರಿಯಲ್ಲಿ ನಡೆದಿದೆ. ಮೃತರಲ್ಲಿ ನಾಲ್ವರು ಬಸ್ ಪ್ರಯಾಣಿಕರು ಮತ್ತು ಎರಡೂ ವಾಹನಗಳ ಚಾಲಕರು ಸೇರಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ಬಸ್ ಹಾಗೂ ಟ್ರಕ್ ಡಿಕ್ಕಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ. ಪುಣೆಯ ಮೆಹೆಕರ್‌ನಿಂದ ಬರುತ್ತಿದ್ದ ಬಸ್​ ಎದುರಿನಿಂದ ಬಂದ ಟ್ರಕ್‌ಗೆ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ತೀವ್ರ ಹಾನಿಯಾಗಿದೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ವಾಹನಗಳ ಜಖಂಗೊಂಡ ಅವಶೇಷಗಳ ಮೂಲಕ ಬದುಕುಳಿದವರನ್ನು ಹೊರತೆಗೆಯಲಾಗುತ್ತಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸಿಂಧ ಖೇಡರಾಜ ಗ್ರಾಮಾಂತರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com