ಇಶ್ರತ್ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿ ವಜಾ ಆದೇಶ ಎತ್ತಿಹಿಡಿದ ಹೈಕೋರ್ಟ್

ಇಶ್ರತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಸಿಬಿಐ ತನಿಖೆಯ ಭಾಗವಾಗಿದ್ದ ಪೊಲೀಸ್ ಅಧಿಕಾರಿಯನ್ನು ನಿವೃತ್ತಿಗೂ ಮುನ್ನವೇ ವಜಾಗೊಳಿಸಿರುವ ಆದೇಶವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿದೆ.
ದೆಹಲಿ ಹೈಕೋರ್ಟ್
ದೆಹಲಿ ಹೈಕೋರ್ಟ್

ನವದೆಹಲಿ: ಇಶ್ರತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಸಿಬಿಐ ತನಿಖೆಯ ಭಾಗವಾಗಿದ್ದ ಪೊಲೀಸ್ ಅಧಿಕಾರಿಯನ್ನು ನಿವೃತ್ತಿಗೂ ಮುನ್ನವೇ ವಜಾಗೊಳಿಸಿರುವ ಆದೇಶವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿದೆ.

ಮಾಜಿ ಐಪಿಎಸ್ ಅಧಿಕಾರಿ ಸತೀಶ್ ಚಂದ್ರ ವರ್ಮಾ, ತಮ್ಮ ನಿವೃತ್ತಿ ಅವಧಿಗೂ ಮುನ್ನ ವಜಾಗೊಳಿಸಿರುವ ಆದೇಶವನ್ನು ಪ್ರಶ್ನಿಸಿದ್ದರು.

2022 ರ ಸೆ.30 ರಂದು ನಿವೃತ್ತರಾಗಬೇಕಿದ್ದ ವರ್ಮಾ ಅವರ ವಿರುದ್ಧ ಸಾರ್ವಜನಿಕ ಮಾಧ್ಯಮದೊಂದಿಗೆ ಸಂವಹನ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಇಲಾಖಾ ತನಿಖೆ ನಡೆಸಿ ಕಳೆದ ವರ್ಷ ಆಗಸ್ಟ್ 30 ರಂದು ವರ್ಮಾ ಅವರನ್ನು ವಜಾಗೊಳಿಸಲಾಗಿತ್ತು. 

"ನಾವು ರಿಟ್ ಅರ್ಜಿಯಲ್ಲಿ ಯಾವುದೇ ಅರ್ಹತೆಯನ್ನು ಕಾಣುತ್ತಿಲ್ಲ. ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ" ಎಂದು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ಸಚ್‌ದೇವ ಅವರ ಪೀಠ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com