![ರಾಹುಲ್ ಗಾಂಧಿ](http://media.assettype.com/kannadaprabha%2Fimport%2F2023%2F5%2F24%2Foriginal%2FRahul_Gandhi.jpg?w=480&auto=format%2Ccompress&fit=max)
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ನೂತನ ಕಟ್ಟಡ ಉದ್ಘಾಟಿಸದಿರುವುದು ಅಥವಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ. ಸಂಸತ್ತನ್ನು ಅಹಂಕಾರದ ಇಟ್ಟಿಗೆಗಳಿಂದ ನಿರ್ಮಿಸಲಾಗಿಲ್ಲ ಆದರೆ ಸಾಂವಿಧಾನಿಕ ಮೌಲ್ಯಗಳ ಮೂಲಕ ನಿರ್ಮಿಸಲಾಗಿದೆ ಎಂದು ಅವರು ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಸಂಸತ್ತಿನ ಸಂಕೀರ್ಣದ ಉದ್ಘಾಟನೆಯನ್ನು ಕಾಂಗ್ರೆಸ್, ಎಡ, ಎಎಪಿ ಮತ್ತು ಟಿಎಂಸಿ ಸೇರಿದಂತೆ 19 ವಿರೋಧ ಪಕ್ಷಗಳು ಬಹಿಷ್ಕರಿಸುವ ನಿರ್ಧಾರವನ್ನು ಘೋಷಿಸಿದ ನಂತರ ಮಾತನಾಡಿರುವ ರಾಹುಲ್ ಗಾಂಧಿ, ಪ್ರಜಾಪ್ರಭುತ್ವದ ಆತ್ಮವನ್ನು ಸಂಸತ್ತಿನಿಂದ ಹೊರ ಹಾಕಲಾಗಿದ್ದು, ಹೊಸ ಕಟ್ಟಡದಲ್ಲಿ ಯಾವುದೇ ಮೌಲ್ಯ ಕಾಣುತ್ತಿಲ್ಲ ಎಂದಿದ್ದಾರೆ.
ರಾಷ್ಟ್ರಪತಿಗಳು ಸಂಸತ್ತಿನ ಉದ್ಘಾಟನೆ ಮಾಡದಿರುವುದು ಅಥವಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಸಂಸತ್ತನ್ನು ಅಹಂಕಾರದ ಇಟ್ಟಿಗೆಗಳಿಂದ ನಿರ್ಮಿಸಲಾಗಿಲ್ಲ, ಆದರೆ ಸಾಂವಿಧಾನಿಕ ಮೌಲ್ಯಗಳ ಮೂಲಕ ನಿರ್ಮಿಸಲಾಗಿದೆ ಎಂದು ಗಾಂಧಿ ಹೇಳಿದ್ದಾರೆ.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಆಹ್ವಾನದ ಮೇರೆಗೆ ಮೋದಿ ಅವರು ಮೇ 28 ರಂದು ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರಪತಿಗಳು ಭಾರತದಲ್ಲಿ ರಾಷ್ಟ್ರದ ಮುಖ್ಯಸ್ಥರು ಮಾತ್ರವಲ್ಲ, ಅವರು ಸಂಸತ್ತಿನ ಅವಿಭಾಜ್ಯ ಅಂಗವಾಗಿದ್ದು, ಅವರೇ ಕಟ್ಟಡ ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ ಎಂದು ವಿರೋಧ ಪಕ್ಷಗಳು ಹೇಳಿವೆ.
Advertisement