ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗ ಸಭೆ: ಕೇರಳ, ರಾಜಸ್ಥಾನ ಸೇರಿ 8 ರಾಜ್ಯಗಳ ಮುಖ್ಯಮಂತ್ರಿಗಳು ಗೈರು!

ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನೀತಿ ಆಯೋಗ ಸಮಿತಿ ಸಭೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್ ಸೇರಿದಂತೆ8 ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದಾರೆಂದು ತಿಳಿದುಬಂದಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನೀತಿ ಆಯೋಗ ಸಮಿತಿ ಸಭೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್ ಸೇರಿದಂತೆ8 ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದಾರೆಂದು ತಿಳಿದುಬಂದಿದೆ.

ರಾಷ್ಟ್ರ ರಾಜಧಾನಿಯ ಪ್ರಗತಿ ಮೈದಾನದಲ್ಲಿರುವ ಹೊಸ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ‘ವಿಕ್ಷಿತ್ ಭಾರತ್ @2047: ಟೀಮ್ ಇಂಡಿಯಾದ ಪಾತ್ರ’ ವಿಷಯದ ಕುರಿತು ಪ್ರಧಾನಿ ನರೇಂದ್ರ ಮೋದಿ ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ.

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಮೋದಿಯವರು ಚರ್ಚೆ ನಡೆಸುತ್ತಿದ್ದಾರೆ.

ಸಭೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೈರು ಹಾಜರಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಇದನ್ನು ಹೊರತುಪಡಿಸಿ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಾಘೇಲ್, ಅರುಣಾಚಲ ಸಿಎಂ ಪೇಮಾ ಖಂಡು, ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ರೆಡ್ಡಿ, ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಸೇರಿದಂತೆ ಇತರ ರಾಜ್ಯಗಳ ಸಿಎಂಗಳು. ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರೆ ಕೇಂದ್ರ ಸಚಿವರು ಸಭೆಯಲ್ಲಿ ಭಾಗವಹಿಸಿದ್ದಾರೆ..

ಮೇ 28 ರಂದು ನೂತನ ಸಂಸತ್ ಭವನ ಉದ್ಘಾಟನೆಯನ್ನು ಬಹಿಷ್ಕರಿಸಲು 21 ವಿರೋಧ ಪಕ್ಷಗಳು ನಿರ್ಧರಿಸಿದ್ದು, ಇದರ ಬೆನ್ನಲ್ಲೇ ಈ ಬೆಳವಣಿಗೆಗಳು ಕಂಡು ಬಂದಿದೆ.

2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಮೋದಿಯವರು ಚರ್ಚೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com