ಕರ್ನಾಟಕ ಚುನಾವಣೆಯಲ್ಲಿ ಸೋಲು: ಬಿಜೆಪಿ ಆಡಳಿತ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಸಭೆ-ಸಮಾಲೋಚನೆ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಪ್ರಧಾನಿ ನರೇಂದ್ರ ಮೋದಿ ನಿನ್ನೆ ದೆಹಲಿಯಲ್ಲಿ ತಮ್ಮ ಮೊದಲ ರಾಜಕೀಯ ಸಭೆ ನಡೆಸಿದ್ದಾರೆ. ನಿನ್ನೆ ಭಾನುವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಅಜೆಂಡಾಗಳ ಸಭೆ ನಡೆಸಿದರು. 
ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆ
ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆ
Updated on

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಪ್ರಧಾನಿ ನರೇಂದ್ರ ಮೋದಿ ನಿನ್ನೆ ದೆಹಲಿಯಲ್ಲಿ ತಮ್ಮ ಮೊದಲ ರಾಜಕೀಯ ಸಭೆ ನಡೆಸಿದ್ದಾರೆ. ನಿನ್ನೆ ಭಾನುವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಅಜೆಂಡಾಗಳ ಸಭೆ ನಡೆಸಿದರು. 

ನಿನ್ನೆ ನೂತನ ಸಂಸತ್ ಭವನವನ್ನು ಬಹಳ ಸಂಭ್ರಮದಿಂದ ಅನಾವರಣಗೊಳಿಸಿದ ನಂತರ ಪ್ರಧಾನ ಮಂತ್ರಿಯವರು ಪಕ್ಷದ ಪ್ರಧಾನ ಕಚೇರಿಯನ್ನು ತಲುಪಿದರು. ಹಲವಾರು ಯೋಜನೆಗಳು ಮತ್ತು ಇತರ ವಿಷಯಗಳಲ್ಲಿ ಬಿಜೆಪಿ ಪಕ್ಷದ ಆಡಳಿತದ ರಾಜ್ಯಗಳ ಕಾರ್ಯಕ್ಷಮತೆಯನ್ನು ಚರ್ಚಿಸಿದರು. ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಚುನಾವಣೆಗೆ ಒಳಪಟ್ಟಿರುವ ಸಂಸದರು ಉತ್ತಮ ಆಡಳಿತ ಮತ್ತು ಅಭಿವೃದ್ಧಿಗಳು, ಬಡವರ ಕಲ್ಯಾಣ ಯೋಜನೆಗಳ ಪ್ರಗತಿಯ ಕುರಿತು ತಮ್ಮ ವರದಿ ಕಾರ್ಡ್‌ಗಳನ್ನು ಮಂಡಿಸಿದರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಬಡವರಿಗೆ ಕಲ್ಯಾಣ ಯೋಜನೆಗಳನ್ನು ಕೊಂಡೊಯ್ಯಲು ಮತ್ತು ಸಂವಹನ ಮತ್ತು 'ಜನ-ಅಭಿಯಾನ'ದಂತಹ ವಿವಿಧ ಸುಲಭ ಸಂವಹನ ವಿಧಾನಗಳ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸುವಂತೆ ಪ್ರಧಾನ ಮಂತ್ರಿಗಳು ಮುಖ್ಯಮಂತ್ರಿಗಳಿಗೆ ಸೂಚಿಸಿದರು ಎಂದು ಬಿಜೆಪಿಯ ಹಿರಿಯ ಕಾರ್ಯಕಾರಿಯೊಬ್ಬರು ಹೇಳಿದರು.

ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಅಜೆಂಡಾಗಳ ಸಭೆಯಲ್ಲಿ, ಇತ್ತೀಚಿನ ಕರ್ನಾಟಕ ಸೋಲು ಮತ್ತು ಇತರ ಉದಯೋನ್ಮುಖ ರಾಜಕೀಯ ಸನ್ನಿವೇಶಗಳ ಹಿನ್ನೆಲೆಯಲ್ಲಿ 2024 ರ ಲೋಕಸಭಾ ಚುನಾವಣೆಯ ಸಿದ್ಧತೆಗಳ ಬಗ್ಗೆ ವ್ಯಾಪಕ ಚರ್ಚೆ ನಡೆಸಲಾಯಿತು.

ಮೇ 30 ರಿಂದ ಜೂನ್ 30 ರವರೆಗೆ ದೇಶಾದ್ಯಂತ ಎಲ್ಲಾ ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ಒಂದು ತಿಂಗಳ ಕಾಲ ವಿಶೇಷ ಸಂಪರ್ಕ ಅಭಿಯಾನವನ್ನು ಯಶಸ್ವಿಯಾಗಿ ನಡೆಸುವ ಕುರಿತು ಚರ್ಚೆಯೂ ನಡೆಯಿತು ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿದುಬಂದಿದೆ.

ಈ ಸುಸಜ್ಜಿತ ಕಾರ್ಯತಂತ್ರದ ಭಾಗವಾಗಿ, ಪ್ರಧಾನಿ ಮತ್ತು ಕೇಂದ್ರ ಸಚಿವರು ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರು ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯುವ ರಾಜಸ್ಥಾನ ಮತ್ತು ತೆಲಂಗಾಣದಂತಹ ರಾಜ್ಯಗಳಲ್ಲಿ ಹೆಚ್ಚು ಗಮನಹರಿಸುವ ಮೂಲಕ ದೇಶಾದ್ಯಂತ ಹಲವು ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲು ನಿರ್ಧರಿಸಲಾಗಿದೆ. 

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನಪರ ಯೋಜನೆಗಳು ಮತ್ತು ಅವುಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳುೇ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com