ಲಂಡನ್: ಕೇಂದ್ರ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಬ್ರಿಟನ್ ಪ್ರವಾಸದಲ್ಲಿದ್ದು, ಎಐ ಸುರಕ್ಷತೆ ಶೃಂಗದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.
ಈ ವೇಳೆ ಐಟಿ ಸಚಿವ ರಾಜೀವ್ ಚಂದ್ರಶೇಖರ್, ಎಲಾನ್ ಮಸ್ಕ್ ಮಗನ ಹೆಸರೂ ತಮ್ಮ ಹೆಸರೂ ಒಂದೇ ಎಂಬ ಅಂಶವನ್ನು ಬಹಿರಂಗಪಡಿಸಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಐಟಿ ಸಚಿವ ರಾಜೀವ್ ಚಂದ್ರಶೇಖರ್, ಎಲಾನ್ ಮಸ್ಕ್, ವೆಂಚರ್ ಕ್ಯಾಪಿಟಲಿಸ್ಟ್ ಸಹ ಆಗಿರುವ ತಮ್ಮ ಮಗ ಶಿವೋನ್ ಜಿಲಿಸ್ ಗೆ ಚಂದ್ರಶೇಖರ್ ಎಂಬ ಹೆಸರೂ ಇದೆ. ಆತನಿಗೆ ನೊಬೆಲ್ ಪ್ರಶಸ್ತಿ ವಿಜೇತ ಪ್ರೊಫೆಸರ್ ಸುಬ್ರಹ್ಮಣ್ಯಂ ಚಂದ್ರಶೇಖರ್ ಸ್ಮರಣಾರ್ಥ ಈ ಹೆಸರನ್ನು ನಾಮಕರಣ ಮಾಡಿದ್ದಾರೆ ಎಂಬ ಮಾಹಿತಿಯನ್ನು ಹೇಳಿದ್ದಾರೆ.
ನಕ್ಷತ್ರಗಳ ರಚನೆ ಮತ್ತು ವಿಕಸನಕ್ಕೆ ಪ್ರಾಮುಖ್ಯತೆಯ ಭೌತಿಕ ಪ್ರಕ್ರಿಯೆಗಳ ಸೈದ್ಧಾಂತಿಕ ಅಧ್ಯಯನಕ್ಕಾಗಿ ಭಾರತೀಯ ಖಗೋಳ ಭೌತಶಾಸ್ತ್ರಜ್ಞರಾಗಿದ್ದ ಸುಬ್ರಹ್ಮಣ್ಯಂ ಚಂದ್ರಶೇಖರ್ ನೊಬೆಲ್ ಪ್ರಶಸ್ತಿಯನ್ನು ಗೆದ್ದಿದ್ದರು.
Look who i bumped into at #AISafetySummit at Bletchley Park, UK.@elonmusk shared that his son with @shivon has a middle name "Chandrasekhar" - named after 1983 Nobel physicist Prof S Chandrasekhar pic.twitter.com/S8v0rUcl8P
— Rajeev Chandrasekhar
Advertisement