ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ: ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ 'ಸುಪ್ರೀಂ' ಮೆಟ್ಟಿಲೇರಿದ ಕೇರಳ

ರಾಜ್ಯ ವಿಧಾನಸಭೆ ಅಂಗೀಕರಿಸಿದ ಎಂಟು ಮಸೂದೆಗಳಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಒಪ್ಪಿಗೆ ನೀಡದೆ ಅನಗತ್ಯವಾಗಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

ತಿರುವನಂತಪುರಂ: ರಾಜ್ಯ ವಿಧಾನಸಭೆ ಅಂಗೀಕರಿಸಿದ ಎಂಟು ಮಸೂದೆಗಳಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಒಪ್ಪಿಗೆ ನೀಡದೆ ಅನಗತ್ಯವಾಗಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಇದರೊಂದಿಗೆ ಮೂರು ರಾಜ್ಯಗಳು ತಮ್ಮ ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದಂತಾಗಿದೆ. ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಮತ್ತು ಪಂಜಾಬ್‌ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಂತರ ಈಗ ಆರಿಫ್ ಮೊಹಮ್ಮದ್ ಖಾನ್ ಅವರು ಮಸೂದೆಗಳಿಗೆ ಒಪ್ಪಿಗೆ ನೀಡದೆ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಉನ್ನತ ನ್ಯಾಯಾಲಯದಲ್ಲಿ ರಾಜ್ಯ ಸರ್ಕಾರಗಳು ಅರ್ಜಿ ಸಲ್ಲಿಸಿವೆ.

ಅರ್ಜಿಯ ಪ್ರಕಾರ, ಕಳೆದ ಎರಡು ವರ್ಷಗಳಿಂದ ರಾಜ್ಯಪಾಲರ ಮುಂದೆ ಮೂರು ವಿಧೇಯಕಗಳು ಬಾಕಿ ಉಳಿದಿವೆ ಎಂದು ಕೇರಳದ ಪಿಣರಾಯಿ ಸರ್ಕಾರ ಆರೋಪಿಸಿದೆ.

ರಿಟ್ ಅರ್ಜಿಯಲ್ಲಿ, ಕೇರಳ ಸರ್ಕಾರ, ಸಾಕಷ್ಟು ಸಮಯದಿಂದ ರಾಜ್ಯಪಾಲರ ಬಳಿ ಬಾಕಿ ಉಳಿದಿರುವ ಮಸೂದೆಗಳನ್ನು ಪಟ್ಟಿ ಮಾಡಿದ್ದು, ವಿಶ್ವವಿದ್ಯಾಲಯ ಕಾನೂನು ತಿದ್ದುಪಡಿ ಮಸೂದೆ, ಕೇರಳ ಸಹಕಾರ ಸಂಘಗಳ ಮಸೂದೆ 2022, ಕೇರಳ ಲೋಕಾಯುಕ್ತ ತಿದ್ದುಪಡಿ ಮಸೂದೆ 2022, ಮತ್ತು ಸಾರ್ವಜನಿಕ ಆರೋಗ್ಯ ಮಸೂದೆ 2021ಕ್ಕೆ ಆರಿಫ್ ಮೊಹಮ್ಮದ್ ಖಾನ್ ಅವರು ಅನುಮೋದನೆ ನೀಡಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com