ನ.30ಕ್ಕೆ ತೆಲಂಗಾಣ ವಿಧಾನಸಭಾ ಚುನಾವಣೆ; ಅಧಿಸೂಚನೆ ಹೊರಡಿಸಿದ ಆಯೋಗ, ಇಂದಿನಿಂದ ನಾಮಪತ್ರ ಸಲ್ಲಿಕೆ

ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಅಧಿಸೂಚನೆಯನ್ನು ಹೊರಡಿಸಿದ್ದು, ಇದನ್ನು ತೆಲಂಗಾಣ ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಇದರೊಂದಿಗೆ 119 ವಿಧಾನಸಭಾ...
ಕೇಂದ್ರ ಚುನಾವಣಾ ಆಯೋಗ
ಕೇಂದ್ರ ಚುನಾವಣಾ ಆಯೋಗ

ಹೈದರಾಬಾದ್: ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಅಧಿಸೂಚನೆಯನ್ನು ಹೊರಡಿಸಿದ್ದು, ಇದನ್ನು ತೆಲಂಗಾಣ ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಇದರೊಂದಿಗೆ 119 ವಿಧಾನಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಅಧಿಸೂಚನೆಯ ಪ್ರಕಾರ, ಇಂದು ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 10 ರವರೆಗೆ ಕೆಲಸದ ದಿನಗಳಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕರಿಸಲಾಗುತ್ತದೆ.

ನವೆಂಬರ್ 13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನವೆಂಬರ್ 15 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ.

119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30 ರಂದು ಚುನಾವಣೆ ನಡೆಯಲಿದೆ ಮತ್ತು ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. 

ಸುವಿಧಾ ಆ್ಯಪ್‌ನಲ್ಲಿಯೂ ನಾಮಪತ್ರಗಳನ್ನು ಸಲ್ಲಿಸಬಹುದು. ಆದರೆ, ಅದರ ಪ್ರತಿಯನ್ನು ನಂತರ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು  ಗೆಜೆಟ್‌ನಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com