ಯುಎಇ ಅಧ್ಯಕ್ಷರ ಜೊತೆ ಪ್ರಧಾನಿ ದೂರವಾಣಿ ಮಾತು: ಪಶ್ಚಿಮ ಏಷ್ಯಾ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಯುಎಇ ಅಧ್ಯಕ್ಷರ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಪಶ್ಚಿಮ ಏಷ್ಯಾ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಯುಎಇ ಅಧ್ಯಕ್ಷರ ಜೊತೆ ಮೋದಿ (ಸಾಂಕೇತಿಕ ಚಿತ್ರ)
ಯುಎಇ ಅಧ್ಯಕ್ಷರ ಜೊತೆ ಮೋದಿ (ಸಾಂಕೇತಿಕ ಚಿತ್ರ)

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಯುಎಇ ಅಧ್ಯಕ್ಷರ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಪಶ್ಚಿಮ ಏಷ್ಯಾ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಉಭಯ ನಾಯಕರೂ ಇಸ್ರೇಲ್ ಹಾಗೂ ಹಮಾಸ್ ನಡುವಿನ ಸಂಘರ್ಷದ ಬಗ್ಗೆ ಚರ್ಚೆ ನಡೆಸಿದ್ದಾರೆ.

ಮಾನವೀಯ ನೆರವು ನೀಡುವುದಕ್ಕಾಗಿ, ಇಸ್ರೇಲ್-ಗಾಜಾ ನಡುವಿನ ಸಂಘರ್ಷ ಕೊನೆಗೊಳ್ಳುವ ಅವಶ್ಯಕತೆ ಇದೆ ಎಂಬ ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಅವರ ಹೇಳಿಕೆ ಬೆನ್ನಲ್ಲೇ ಭಾರತದ ಪ್ರಧಾನಿ ಮೋದಿ- ಯುಎಇ ಅಧ್ಯಕ್ಷರು ದೂರವಾಣಿ ಮೂಲಕ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

28 ದಿನಗಳಿಂದ ಇಸ್ರೇಲ್-ಹಮಾಸ್ ನಡುವೆ ಸಂಘರ್ಷ ಮುಂದುವರೆಯುತ್ತಿದ್ದು, ಈ ವರೆಗೂ 10,000 ಮಂದಿ ಜೀವ ಕಳೆದುಕೊಂಡಿದ್ದಾರೆ.

“ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಯುಎಇ ಅಧ್ಯಕ್ಷರಾದ ನನ್ನ ಸಹೋದರ ಎಚ್‌ಎಚ್ ಮೊಹಮದ್ ಬಿನ್‌ಜಾಯೆದ್ ಅವರೊಂದಿಗೆ ಉತ್ತಮ ಸಂವಾದ ನಡೆಸಿದೆ. ಭಯೋತ್ಪಾದನೆ, ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಮತ್ತು ನಾಗರಿಕರ ಜೀವಹಾನಿಯ ಬಗ್ಗೆ ನಾವು ಆಳವಾದ ಕಳವಳಗಳನ್ನು ಹಂಚಿಕೊಳ್ಳುತ್ತೇವೆ. ಭದ್ರತೆ ಮತ್ತು ಮಾನವೀಯ ಪರಿಸ್ಥಿತಿಯ ಶೀಘ್ರ ಪರಿಹಾರದ ಅಗತ್ಯವನ್ನು ನಾವು ಒಪ್ಪುತ್ತೇವೆ ಮತ್ತು ಬಾಳಿಕೆ ಬರುವ ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆ ಪ್ರತಿಯೊಬ್ಬರ ಹಿತಾಸಕ್ತಿಯಲ್ಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com