ತೆಲಂಗಾಣ; ಸಚಿವರ ಪೊಲೀಸ್ ಬೆಂಗಾವಲು ಉಸ್ತುವಾರಿ ಗುಂಡು ಹಾರಿಸಿಕೊಂಡು ಸಾವು

ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದ್ರ ರೆಡ್ಡಿ ಅವರ ಬೆಂಗಾವಲು ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ 59 ವರ್ಷದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಸೇವಾ ಆಯುಧದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಹೈದರಾಬಾದ್: ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದ್ರ ರೆಡ್ಡಿ ಅವರ ಬೆಂಗಾವಲು ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ 59 ವರ್ಷದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಸೇವಾ ಆಯುಧದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರ್ಮ್ಡ್ ರಿಸರ್ವ್‌ನಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಮೊಹಮ್ಮದ್ ಫಜಲ್ ಅಲಿ ಅವರು ಜುಬಿಲಿ ಹಿಲ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್ ಬಳಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ತಮ್ಮ ಸರ್ವಿಸ್ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಾಥಮಿಕ ಮಾಹಿತಿ ಆಧಾರದ ಮೇಲೆ, ಹಣಕಾಸಿನ ಸಮಸ್ಯೆಗಳು ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಉಪ ಪೊಲೀಸ್ ಆಯುಕ್ತ (ಪಶ್ಚಿಮ ವಲಯ) ಡಿ ಜೋಯಲ್ ಡೇವಿಸ್ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಸಚಿವರು ಭೇಟಿ ನೀಡಿದ್ದಾರೆ. ಸದ್ಯ ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com