ಕೇರಳ ಸರಣಿ ಬಾಂಬ್ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಮಹಿಳೆ ಸಾವು, ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಕೇರಳದ ಕ್ರಿಶ್ಚಿಯನ್ ಧಾರ್ಮಿಕ ಸಭೆಯಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೊಚ್ಚಿ: ಕೇರಳದ ಕ್ರಿಶ್ಚಿಯನ್ ಧಾರ್ಮಿಕ ಸಭೆಯಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿದೆ.

ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 61 ವರ್ಷದ ಮೊಲಿ ಜಾಲಿ ಅವರ ಮೃತಪಟ್ಟಿದ್ದಾರೆ. ಇವರು ಕಳಮಶ್ಶೇರಿಯ ನಿವಾಸಿಯಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಅಕ್ಟೋಬರ್ 29ರಂದು ಸಂಭವಿಸಿದ್ದ ಸ್ಫೋಟದಲ್ಲಿ ಮಹಿಳೆಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದವು. ಕೃತಕ ಉಸಿರಾಟದ ವ್ಯವಸ್ಥೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಸ್ಫೋಟದಲ್ಲಿ ಗಾಯಗೊಂಡಿದ್ದ 12 ವರ್ಷ ವಯಸ್ಸಿನ ಲಿಬಿನಾ ಎಂಬ ಬಾಲಕಿ ಅ.30ರಂದು ಮೃತಪಟ್ಟಿದ್ದಳು. ಸ್ಫೋಟ ನಡೆದ ದಿನವೇ ಇಬ್ಬರು ಮಹಿಳೆಯರು ಮೃತಪಟ್ಟಿದ್ದರು.

ಸ್ಫೋಟ ನಡೆದ ಕೆಲವು ಗಂಟೆಗಳ ನಂತರ ಡೊಮಿನಿಕ್ ಮಾರ್ಟಿನ್ ಎಂಬ ವ್ಯಕ್ತಿ, ಸ್ಫೋಟಕ್ಕೆ ಹೊಣೆ ಹೊತ್ತುಕೊಂಡು ಪೊಲೀಸರಿಗೆ ಶರಣಾಗಿದ್ದ. ಇಂದು ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com