ಸುಪ್ರೀಂ ಕೋರ್ಟ್ ಗೆ ಮೂವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ ಮೂವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ನ್ಯಾಯಾಧೀಶರನ್ನಾಗಿ ನೇಮಕ ಮಾಡುವಂತೆ ಶಿಫಾರಸು ಮಾಡಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ ಮೂವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ನ್ಯಾಯಾಧೀಶರನ್ನಾಗಿ ನೇಮಕ ಮಾಡುವಂತೆ ಶಿಫಾರಸು ಮಾಡಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ ಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನೊಳಗೊಂಡ ಕೊಲಿಜಿಯಂ, ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ, ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ಮತ್ತು ಗೌಹಾಟಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡುವಂತೆ ಶಿಫಾರಸು ಮಾಡಿದೆ.

ಕೊಲಿಜಿಯಂ ಶಿಫಾರಸಿಗೆ ಕೇಂದ್ರ ಸರ್ಕಾರ ಒಪ್ಪಿಕೊಂಡರೆ, ಸುಪ್ರೀಂ ಕೋರ್ಟ್ ಪೂರ್ಣಪ್ರಮಾಣದಲ್ಲಿ 34 ನ್ಯಾಯಾಧೀಶರನ್ನು ಹೊಂದಲಿದೆ.

ಸುಪ್ರೀಂ ಕೋರ್ಟ್ ಒಟ್ಟು 34 ನ್ಯಾಯಾಧೀಶರ ಬಲವನ್ನು ಹೊಂದಿದೆ ಮತ್ತು ಪ್ರಸ್ತುತ 31 ನ್ಯಾಯಾಧೀಶರೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಐದು ಸದಸ್ಯರ ಕೊಲಿಜಿಯಂ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com