ಭದ್ರತಾ ಕಾರಣ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತ

ಭದ್ರತಾ ಕಾರಣಗಳಿಗಾಗಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ

ಶ್ರೀನಗರ: ಭದ್ರತಾ ಕಾರಣಗಳಿಗಾಗಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. 

ದಕ್ಷಿಣ ಕಾಶ್ಮೀರ ಜಿಲ್ಲೆಯ ವಂಪೋರಾ ಮತ್ತು ಹುನಿಪೋರಾ ಪ್ರದೇಶಗಳಲ್ಲಿ ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಟೆಲಿಕಾಂ ಸೇವಾ ಪೂರೈಕೆದಾರರಿಗೆ ಸೂಚನೆಗಳನ್ನು ಕಾಶ್ಮೀರ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವಿಜಯ್ ಕುಮಾರ್ ಅವರು ಹೊರಡಿಸಿದ್ದಾರೆ.

ಎಡಿಜಿಪಿ ಆದೇಶದಲ್ಲಿ ದೇಶವಿರೋಧಿ ಶಕ್ತಿಗಳಿಂದ ಮೊಬೈಲ್ ಡೇಟಾ ಸೇವೆಗಳನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯನ್ನು ಉಲ್ಲೇಖಿಸಲಾಗಿದೆ. ಇದು ಸಾರ್ವಜನಿಕ ಸುವ್ಯವಸ್ಥೆ ಹದಗೆಡಲು ಕಾರಣವಾಗಬಹುದು.

ನವೆಂಬರ್ 5 ರಂದು ಸಂಜೆ 7ರಿಂದ ನವೆಂಬರ್ 8ರ ಸಂಜೆ 7 ರವರೆಗೆ ಈ ಪ್ರದೇಶಗಳ ಮೂರು ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಡೇಟಾವನ್ನು ಸ್ಥಗಿತಗೊಳಿಸುವಂತೆ ಟೆಲಿಕಾಂ ಸೇವಾ ಪೂರೈಕೆದಾರರಿಗೆ ಸೂಚಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com