ಕೇದಾರನಾಥದಲ್ಲಿ ರಾಹುಲ್ ಗಾಂಧಿ, ವರುಣ್ ಗಾಂಧಿ ಭೇಟಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅವರ ಸೋದರಸಂಬಂಧಿಯಾಗಿರುವ ಉತ್ತರ ಪ್ರದೇಶ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಮಂಗಳವಾರ ಕೇದಾರನಾಥ ದೇವಸ್ಥಾನದಲ್ಲಿ ಪರಸ್ಪರ ಭೇಟಿಯಾಗಿದ್ದು, ಇಬ್ಬರೂ ಪ್ರಾರ್ಥನೆ...
ರಾಹುಲ್ ಗಾಂಧಿ, ವರುಣ್ ಗಾಂಧಿ
ರಾಹುಲ್ ಗಾಂಧಿ, ವರುಣ್ ಗಾಂಧಿ

ಕೇದಾರನಾಥ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅವರ ಸೋದರಸಂಬಂಧಿಯಾಗಿರುವ ಉತ್ತರ ಪ್ರದೇಶ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಮಂಗಳವಾರ ಕೇದಾರನಾಥ ದೇವಸ್ಥಾನದಲ್ಲಿ ಪರಸ್ಪರ ಭೇಟಿಯಾಗಿದ್ದು, ಇಬ್ಬರೂ ಪ್ರಾರ್ಥನೆ ಸಲ್ಲಿಸಲು ದೇವಸ್ಥಾನಕ್ಕೆ ಆಗಮಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಸಾರ್ವಜನಿಕವಾಗಿ ಅಪರೂಪಕ್ಕೆ ಒಟ್ಟಿಗೆ ಕಾಣಿಸಿಕೊಳ್ಳುವ ಈ ಸೋದರ ಸಂಬಂಧಿಗಳ ನಡುವಿನ ಭೇಟಿ, ವರುಣ್ ಗಾಂಧಿಯವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಬಹುದು ಎಂಬ ಊಹಾಪೋಹಗಳನ್ನು ಹುಟ್ಟುಹಾಕಿದೆ.

ಸಂಜಯ್ ಮತ್ತು ಮೇನಕಾ ಗಾಂಧಿ ಅವರ ಪುತ್ರ ವರುಣ್ ಗಾಂಧಿ ಅವರು ಇತ್ತೀಚಿನ ತಿಂಗಳುಗಳಲ್ಲಿ ಬಿಜೆಪಿಯ ಪ್ರಮುಖ ಸಭೆಗಳಲ್ಲಿ ಕಾಣಿಸಿಕೊಂಡಿಲ್ಲ ಮತ್ತು ಹಲವು ವಿಷಯಗಳಲ್ಲಿ ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಾರೆ.

ರಾಹುಲ್ ಗಾಂಧಿ ಮತ್ತು ವರುಣ್ ಗಾಂಧಿ ಇಬ್ಬರೂ ದೇವಸ್ಥಾನದ ಹೊರಗೆ ಸಂಕ್ಷಿಪ್ತವಾಗಿ ಭೇಟಿಯಾದರು ಮತ್ತು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು ಎಂದು ಮೂಲಗಳು ತಿಳಿಸಿವೆ. ಈ ಚಿಕ್ಕ ಭೇಟಿಯಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ ಅವರು ಹೇಳಿದ್ದಾರೆ.

ರಾಹುಲ್ ಗಾಂಧಿ ಕಳೆದ ಮೂರು ದಿನಗಳಿಂದ ಉತ್ತರಾಖಂಡದ ಕೇದಾರನಾಥದಲ್ಲಿದ್ದು, ವರುಣ್ ಗಾಂಧಿ ಮಂಗಳವಾರ ತಮ್ಮ ಕುಟುಂಬದೊಂದಿಗೆ ಶಿವನ ದರ್ಶನ ನಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com