ಹರಿಯಾಣ: ಯಮುನಾ ನಗರದಲ್ಲಿ ನಕಲಿ ಮದ್ಯ ಸೇವಿಸಿ ಆರು ಮಂದಿ ಸಾವು

ಹರಿಯಾಣದ ಯಮುನಾ ನಗರ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ 6 ಮಂದಿ ಸಾವಿಗೀಡಾಗಿದ್ದು, ಅವರು ನಕಲಿ ಮದ್ಯ ಸೇವಿಸಿದ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಂಡೀಗಢ: ಹರಿಯಾಣದ ಯಮುನಾ ನಗರ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ 6 ಮಂದಿ ಸಾವಿಗೀಡಾಗಿದ್ದು, ಅವರು ನಕಲಿ ಮದ್ಯ ಸೇವಿಸಿದ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ತನಿಖೆ ಇನ್ನೂ ನಡೆಯುತ್ತಿದೆ ಮತ್ತು ಕೆಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಅವರು ಹೇಳಿದ್ದಾರೆ.

"ಒಬ್ಬ ವ್ಯಕ್ತಿಯ ಸಾವಿನ ಬಗ್ಗೆ ಬುಧವಾರ ಮಧ್ಯಾಹ್ನ ಆಸ್ಪತ್ರೆಯಿಂದ ನಮಗೆ ಮಾಹಿತಿ ಬಂದಿದೆ. ಇದು ನಕಲಿ ಮದ್ಯದ ಸಾವು ಎಂದು ಹೇಳಲಾಗಿದೆ" ಎಂದು ಯಮುನಾ ನಗರ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಗಂಗಾ ರಾಮ್ ಪುನಿಯಾ ಅವರು ಫೋನ್‌ ಮೂಲಕ ಪಿಟಿಐಗೆ ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಆದರೆ ಪೊಲೀಸರು ಮಾಹಿತಿ ಆಧರಿಸಿ ತನಿಖೆ ಆರಂಭಿಸಿದ್ದು, ಸಮೀಪದ ಗ್ರಾಮಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದರು.

ತನಿಖೆಯ ವೇಳೆ, ಜಿಲ್ಲೆಯ ಎರಡು ಗ್ರಾಮಗಳಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಮೃತರು ನಕಲಿ ಮದ್ಯ ಸೇವಿಸಿರುವ ಶಂಕೆ  ವ್ಯಕ್ತವಾಗಿದೆ ಎಸ್ಪಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com