ಮಾನವ ಕಳ್ಳಸಾಗಣೆ ಪ್ರಕರಣ: ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ NIA ದಾಳಿ, ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿಯರ ಬಂಧನ

ಮಾನವ ಕಳ್ಳ ಸಾಗಣೆ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ(National Investigative agency-NIA) ದೇಶದ 10 ರಾಜ್ಯಗಳ ವಿವಿಧ ಕಡೆಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.  
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ/ಬೆಂಗಳೂರು: ಮಾನವ ಕಳ್ಳ ಸಾಗಣೆ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ(National Investigative agency-NIA) ದೇಶದ 10 ರಾಜ್ಯಗಳ ವಿವಿಧ ಕಡೆಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.  

ತ್ರಿಪುರಾ, ಅಸ್ಸಾಂ, ಪಶ್ಚಿಮ ಬಂಗಾಳ, ಕರ್ನಾಟಕ, ತಮಿಳುನಾಡು, ತೆಲಂಗಾಣ, ಹರಿಯಾಣ, ಪುದುಚೇರಿ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಎನ್‌ಐಎ ಶೋಧ ನಡೆಸುತ್ತಿದೆ.

ಬೆಂಗಳೂರಿನ 15 ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ದಾಳಿ: ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಎನ್ ಐಎ ಇಂದು ದಾಳಿ ನಡೆಸಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ.

ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶಿಯರ ಬಂಧನ: ಇದೇ ವೇಳ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಎಂಟು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. 

ಸೋಲದೇವನಹಳ್ಳಿ, ಕೆ.ಆರ್. ಪುರ, ಬೆಳ್ಳಂದೂರು ಪ್ರದೇಶ ಸೇರಿದಂತೆ 15 ಸ್ಥಳಗಳಲ್ಲಿ ಎನ್‌ಐಎ ತಂಡ ಇಂದು ಏಕಕಾಲದಲ್ಲಿ ದಾಳಿ ನಡೆಸಿತು. ದಾಳಿಯ ಸಮಯದಲ್ಲಿ, ಭಾರತ ಗಡಿಯ ಮೂಲಕ ಅಕ್ರಮವಾಗಿ ನುಸುಳಿ ಬಂದು ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ತಂಗಿದ್ದ ಕನಿಷ್ಠ ಎಂಟು ಮಂದಿ ಬಾಂಗ್ಲಾದೇಶೀಯರನ್ನು ಅಧಿಕಾರಿಗಳು ಪತ್ತೆ ಮಾಡಿ ಬಂಧಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com