ಡಿಸೆಂಬರ್ 2ನೇ ವಾರದಲ್ಲಿ ಸಂಸತ್ ಚಳಿಗಾಲದ ಅಧಿವೇಶನ ಆರಂಭ ಸಾಧ್ಯತೆ

ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ ಎರಡನೇ ವಾರದಲ್ಲಿ ಆರಂಭವಾಗುವ ಸಾಧ್ಯತೆಯಿದೆ ಮತ್ತು ಕ್ರಿಸ್‌ಮಸ್‌ಗೆ ಮುಂಚಿತವಾಗಿ ಮುಕ್ತಾಯಗೊಳ್ಳಬಹುದು ಎಂದು ಮೂಲಗಳು ಬುಧವಾರ ತಿಳಿಸಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ ಎರಡನೇ ವಾರದಲ್ಲಿ ಆರಂಭವಾಗುವ ಸಾಧ್ಯತೆಯಿದೆ ಮತ್ತು ಕ್ರಿಸ್‌ಮಸ್‌ಗೆ ಮುಂಚಿತವಾಗಿ ಮುಕ್ತಾಯಗೊಳ್ಳಬಹುದು ಎಂದು ಮೂಲಗಳು ಬುಧವಾರ ತಿಳಿಸಿವೆ.

ಡಿಸೆಂಬರ್ 3 ರಂದು ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಸಂಸತ್ ಅಧಿವೇಶನ ಪ್ರಾರಂಭವಾಗಬಹುದು ಎಂದು ಅವರು ಹೇಳಿದ್ದಾರೆ.

ಚಳಿಗಾಲದ ಅಧಿವೇಶನವು ಸಾಮಾನ್ಯವಾಗಿ ನವೆಂಬರ್ ಮೂರನೇ ವಾರದಲ್ಲಿ ಪ್ರಾರಂಭವಾಗುತ್ತದೆ ಮತ್ತು ಡಿಸೆಂಬರ್ 25ಕ್ಕೆ ಮುಂಚಿತವಾಗಿ ಮುಕ್ತಾಯಗೊಳ್ಳುತ್ತದೆ. ಆದರೆ ಈ ಬಾರಿ ಡಿಸೆಂಬರ್ ನಲ್ಲಿ ಆರಂಭವಾಗುವ ಸಾಧ್ಯತೆ ಇದೆ.

ಐಪಿಸಿ, ಸಿಆರ್‌ಪಿಸಿ ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬದಲಿಸಲು ಮೂರು ಪ್ರಮುಖ ಮಸೂದೆಗಳನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ. ಗೃಹ ಇಲಾಖೆ ಸ್ಥಾಯಿ ಸಮಿತಿಯು ಈಗಾಗಲೇ ಈ ಮೂರು ಮಸೂದೆಗೆ ಸಂಬಂಧಿಸಿದ ವರದಿಗಳನ್ನು ಇತ್ತೀಚೆಗೆ ಅಂಗೀಕರಿಸಿದೆ.

ಸಂಸತ್ತಿನಲ್ಲಿ ಬಾಕಿ ಉಳಿದಿರುವ ಮತ್ತೊಂದು ಪ್ರಮುಖ ಮಸೂದೆ ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ ವಿಧೇಯಕವನ್ನು ಈ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com