ಶೋಪಿಯಾನ್'ನಲ್ಲಿ ಎನ್ಕೌಂಟರ್: ಓರ್ವ ಉಗ್ರನ ಸದೆಬಡಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ನ ಕಥೋಹಾಲನ್​ ಪ್ರದೇಶದಲ್ಲಿ ಕಳೆದ ರಾತ್ರಿ ಭದ್ರತಾ ಪಡೆಗಳು ಎನ್​ಕೌಂಟರ್​ ನಡೆಸಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್​ ಫ್ರಂಟ್​ನೊಂದಿಗೆ (ಟಿಆರ್​ಎಫ್​) ಸಂಬಂಧ ಹೊಂದಿದ್ದ ಓರ್ವ ಉಗ್ರನನ್ನು ಹತ್ಯೆ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶೋಪಿಯಾನ್‌ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ನ ಕಥೋಹಾಲನ್​ ಪ್ರದೇಶದಲ್ಲಿ ಕಳೆದ ರಾತ್ರಿ ಭದ್ರತಾ ಪಡೆಗಳು ಎನ್​ಕೌಂಟರ್​ ನಡೆಸಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್​ ಫ್ರಂಟ್​ನೊಂದಿಗೆ (ಟಿಆರ್​ಎಫ್​) ಸಂಬಂಧ ಹೊಂದಿದ್ದ ಓರ್ವ ಉಗ್ರನನ್ನು ಹತ್ಯೆ ಮಾಡಿದೆ.

ಈ ಕುರಿತು ಕಾಶ್ಮೀರ ವಲಯ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದ್ದಾರೆ.

ಹತ್ಯೆಯಾದ ಭಯೋತ್ಪಾದಕನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ಇನ್ನಿತರ ಭಯೋತ್ಪಾದನೆ ನಡೆಸಲು ಸಂಚು ರೂಪಿಸಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂಬ ಮಾಹಿತಿಯನ್ನು ಅಧಿಕಾರಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com