ಮೊಯಿತ್ರಾ ಉಚ್ಚಾಟನೆಗೆ ಸಂಬಂಧಿಸಿದ ಲೋಕಸಭೆ ನೈತಿಕ ಸಮಿತಿ ವರದಿ ಸ್ಪೀಕರ್ ಕಚೇರಿಗೆ ಸಲ್ಲಿಕೆ: ಮೂಲಗಳು

ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆಗೆ...
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ನವದೆಹಲಿ: ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆಗೆ ಸಂಬಂಧಿಸಿದ ಲೋಕಸಭೆ ನೈತಿಕ ಸಮಿತಿಯ ವರದಿಯನ್ನು ಸ್ಪೀಕರ್ ಓಂ ಬಿರ್ಲಾ ಅವರ ಕಚೇರಿಗೆ ಸಲ್ಲಿಸಲಾಗಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ಲೋಕಸಭೆಯ ನೈತಿಕ ಸಮಿತಿಯ ಅಧ್ಯಕ್ಷ ವಿನೋದ್ ಕುಮಾರ್ ಸೋಂಕರ್ ಅವರು 'ಹಣಕ್ಕಾಗಿ-ಪ್ರಶ್ನೆ' ಕುರಿತ ಸಮಿತಿಯ ವರದಿಯನ್ನು ಸ್ಪೀಕರ್ ಕಚೇರಿಗೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ನಡೆದ ನೈತಿಕ ಸಮಿತಿ ಸಭೆಯಲ್ಲಿ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪದ ಮೇಲೆ ಮೊಯಿತ್ರಾ ಅವರನ್ನು ಸದನದಿಂದ ಉಚ್ಚಾಟಿಸಲು ಶಿಫಾರಸು ಮಾಡಿದ ವರದಿಯನ್ನು ಬಹುಮತದಿಂದ ಅಂಗೀಕರಿಸಲಾಗಿದೆ.

"ಅನೈತಿಕ ನಡವಳಿಕೆ" ಮತ್ತು "ಸದನದ ಅವಹೇಳನ" ಕ್ಕಾಗಿ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲು ಸಮಿತಿಯು ಶಿಫಾರಸು ಮಾಡಿದೆ.

ಗುರುವಾರ ನಡೆದ ಸಮಿತಿಯ ಸಭೆಯಲ್ಲಿ ಹಾಜರಿದ್ದ 10 ಸದಸ್ಯರಲ್ಲಿ ಆರು ಮಂದಿ 479 ಪುಟಗಳ ವರದಿಯನ್ನು ಬೆಂಬಲಿಸಿ ಮತ ಚಲಾಯಿಸಿದರೆ ನಾಲ್ವರು ವಿರೋಧ ಪಕ್ಷದ ಸದಸ್ಯರು ವರದಿಯನ್ನು ವಿರೋಧಿಸಿದ್ದರು. ಈ ವರದಿಯನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಲಾಗಿದ್ದು, ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಯ ಬಳಿಕ ಪೂರಕ ಕ್ರಮ ತೆಗೆದುಕೊಳ್ಳಲಾಗುತ್ತದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com