ಬಿಷ್ಣೋಯ್-ಖಾಲ್ಸಾ ಉಗ್ರ ನೆಟ್‌ವರ್ಕ್ ಪ್ರಕರಣ: ಮೂರನೇ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ

ಅಂತರಾಷ್ಟ್ರೀಯ ಭಯೋತ್ಪಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಶುಕ್ರವಾರ ದರೋಡೆಕೋರ, ಉಗ್ರ ಲಾರೆನ್ಸ್ ಬಿಷ್ಣೋಯ್ ಮತ್ತು ಬಬ್ಬರ್ ಖಾಲ್ಸಾ ವಿರುದ್ಧ ಮೂರನೇ ಚಾರ್ಜ್ ಶೀಟ್ ಸಲ್ಲಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಅಂತರಾಷ್ಟ್ರೀಯ ಭಯೋತ್ಪಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಶುಕ್ರವಾರ ದರೋಡೆಕೋರ, ಉಗ್ರ ಲಾರೆನ್ಸ್ ಬಿಷ್ಣೋಯ್ ಮತ್ತು ಬಬ್ಬರ್ ಖಾಲ್ಸಾ ವಿರುದ್ಧ ಮೂರನೇ ಚಾರ್ಜ್ ಶೀಟ್ ಸಲ್ಲಿಸಿದೆ.

ಈ ಪೂರಕ ಚಾರ್ಜ್‌ಶೀಟ್‌ನಲ್ಲಿ ಆರೋಪಿಗಳು ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಕುರಿತು ನಿರ್ಣಾಯಕ ವಿವರಗಳನ್ನು ನೀಡಲಾಗಿದೆ.

ಇದರೊಂದಿಗೆ ಉಗ್ರ ನೆಟ್‌ವರ್ಕ್ ಪ್ರಕರಣದಲ್ಲಿ ಎನ್‌ಐಎ ಇದುವರೆಗೆ ಚಾರ್ಜ್‌ಶೀಟ್ ನಲ್ಲಿ ಹೆಸರಿಸಿರುವ ಆರೋಪಿಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ಈ ವರ್ಷ ಮಾರ್ಚ್ 24 ರಂದು, NIA 14 ಆರೋಪಿಗಳ ವಿರುದ್ಧ ಆರಂಭಿಕ ಆರೋಪಪಟ್ಟಿಯನ್ನು ಸಲ್ಲಿಸಿತ್ತು. ನಂತರ ಆಗಸ್ಟ್ 9 ರಂದು ಮೂರು ಹೆಚ್ಚುವರಿ ವ್ಯಕ್ತಿಗಳ ವಿರುದ್ಧ ಮೊದಲ ಪೂರಕ ಚಾರ್ಜ್ ಶೀಟ್ ಸಲ್ಲಿಸಿತು.

ಎಲ್ಲಾ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120(ಬಿ) ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 ರ ಸೆಕ್ಷನ್ 17, 18, 18 (ಬಿ) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com