ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಜನತೆ ನಿರ್ಧಾರ: ಡಿಸಿಎಂ ಡಿಕೆ ಶಿವಕುಮಾರ್

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಜನತೆ ನಿರ್ಧರಿಸಿದ್ದಾರೆ ಎಂದು ಕರ್ನಾಟಕ  ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್

ವಿಜಯವಾಡ: ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಜನತೆ ನಿರ್ಧರಿಸಿದ್ದಾರೆ ಎಂದು ಕರ್ನಾಟಕ  ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಆಂಧ್ರಪ್ರದೇಶದ ವಿಜಯವಾಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಇಡೀ ತೆಲಂಗಾಣ ಬದಲಾವಣೆ ಬಯಸಿದೆ. ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ಇಡೀ ತೆಲಂಗಾಣದ ಜನತೆ  ನಿರ್ಧರಿಸಿದ್ದಾರೆ ಎಂದರು.

10 ವರ್ಷಗಳ ನಂತರ ಬಿಆರ್ ಎಸ್, ಕೆಸಿಆರ್ ಎಲ್ಲರೂ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಸಿಎಂ ಕೆಸಿಆರ್ ಗೆ ಜನತೆ ಶಾಶ್ವತವಾಗಿ ವಿಶ್ರಾಂತಿ ನೀಡಲಿದ್ದಾರೆ. ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದ್ದು, ಎಲ್ಲಾ ಗ್ಯಾರಂಟಿಗಳನ್ನು ಅನುಷ್ಟಾನಗೊಳಿಸುತ್ತೇವೆ ಎಂದು ಭರವಸೆ ನೀಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com