ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ: ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು, ಯುಆರ್‌ಎಲ್ ನೀಡುವಂತೆ ಮೆಟಾಗೆ ಪತ್ರ

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ನವದೆಹಲಿ: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಪೊಲೀಸರು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಈ ವಿಷಯದ ಬಗ್ಗೆ ತನಿಖೆಯನ್ನು ನಡೆಸಲಾಗುತ್ತಿದೆ. ಅಲ್ಲದೆ, ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡವರ ಖಾತೆಯ ಯುಆರ್‌ಎಲ್ ನೀಡುವಂತೆ ಮೆಟಾಗೆ ಪತ್ರ ಬರೆಯಲಾಗಿದೆ.

ರಶ್ಮಿಕಾ ಮಂದಣ್ಣ ಅವರ ತಿರುಚಿದ ವಿಡಿಯೋಗೆ ಸಂಬಂಧಿಸಿದಂತೆ, ಐಪಿಸಿಯ ಯು/ಎಸ್ 465 ಮತ್ತು 469, 1860 ಮತ್ತು ಐಟಿ ಆಕ್ಟ್, 2000 ರ ಸೆಕ್ಷನ್ 66 ಸಿ ಮತ್ತು 66 ಇ ಅಡಿಯಲ್ಲಿ ದೆಹಲಿ ಪೊಲೀಸ್ ವಿಶೇಷ ಕೋಶದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಮತ್ತು ಈ ಸಂಬಂಧ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಯುಆರ್‌ಎಲ್ ನೀಡುವಂತೆ ಮೆಟಾಗೆ ಮನವಿ

ನಟಿ ರಶ್ಮಿಕಾ ಮಂದಣ್ಣ ಅವರ 'ಡೀಪ್‌ಫೇಕ್' ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಖಾತೆಯ ಯುಆರ್‌ಎಲ್ ನೀಡುವಂತೆ ದೆಹಲಿ ಪೊಲೀಸರು ಮೆಟಾಗೆ ಪತ್ರ ಬರೆದಿದ್ದಾರೆ. ಅಧಿಕಾರಿಯೊಬ್ಬರ ಪ್ರಕಾರ, ದೆಹಲಿ ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ನಟಿಯ ತಿರುಚಿದ ವಿಡಿಯೋ ಶೇರ್ ಮಾಡಿದವರ ಮಾಹಿತಿಯನ್ನೂ ಕೇಳಿದ್ದಾರೆ.

'ವಿಡಿಯೋವನ್ನು ಹಂಚಿಕೊಂಡ ಖಾತೆಯ ಯುಆರ್‌ಎಲ್ ಐಡಿಯನ್ನು ನೀಡುವಂತೆ ನಾವು ಮೆಟಾಗೆ ಪತ್ರ ಬರೆದಿದ್ದೇವೆ' ಎಂದು ತನಿಖಾ ತಂಡದ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿರುವ ಸಂಬಂಧ ಕ್ರಮ ಕೈಗೊಳ್ಳುವಂತೆ ದೆಹಲಿ ಮಹಿಳಾ ಆಯೋಗ ಕೋರಿದೆ.

'ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ ಎಂಬ ಮಾಧ್ಯಮ ವರದಿಗಳ ಕುರಿತು ದೆಹಲಿ ಮಹಿಳಾ ಆಯೋಗವು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿದೆ' ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

'ಇದು ಅತ್ಯಂತ ಗಂಭೀರವಾದ ವಿಷಯವಾಗಿದೆ. ವಿಷಯದ ಗಂಭೀರತೆಯನ್ನು ಪರಿಗಣಿಸಿ, ನವೆಂಬರ್ 17 ರೊಳಗೆ ದಯವಿಟ್ಟು ಈ ಪ್ರಕರಣದಲ್ಲಿ ದಾಖಲಾದ ಎಫ್‌ಐಆರ್‌ನ ಪ್ರತಿ, ಇದಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ವಿವರಗಳನ್ನು ಮತ್ತು ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸಿ' ಎಂದು ಡಿಸಿಡಬ್ಲ್ಯು ಹೇಳಿಕೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com