ನವದೆಹಲಿ: ಚಲಿಸುತ್ತಿದ್ದ ಮೆಟ್ರೋ ರೈಲಿನ ಮುಂದೆ ಹಾರಿ ಮಹಿಳೆ ಆತ್ಮಹತ್ಯೆ!

ಚಲಿಸುತ್ತಿದ್ದ ಮೆಟ್ರೋ ರೈಲಿನ ಮುಂದೆ ಹಾರಿ 40 ವರ್ಷದ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ನಗರದ ರಾಜೌರಿ ಗಾರ್ಡನ್ ಮೆಟ್ರೋ ನಿಲ್ದಾಣದಲ್ಲಿ ಮಧ್ಯಾಹ್ನ 1.15ರ ಸುಮಾರಿಗೆ ಈ ಘಟನೆ ನಡೆದಿದೆ.
ಮೆಟ್ರೋ ರೈಲಿನ ಸಾಂದರ್ಭಿಕ ಚಿತ್ರ
ಮೆಟ್ರೋ ರೈಲಿನ ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ಚಲಿಸುತ್ತಿದ್ದ ಮೆಟ್ರೋ ರೈಲಿನ ಮುಂದೆ ಹಾರಿ 40 ವರ್ಷದ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ನಗರದ ರಾಜೌರಿ ಗಾರ್ಡನ್ ಮೆಟ್ರೋ ನಿಲ್ದಾಣದಲ್ಲಿ ಮಧ್ಯಾಹ್ನ 1.15ರ ಸುಮಾರಿಗೆ ಈ ಘಟನೆ ನಡೆದಿದೆ.

ದೆಹಲಿ ಮೆಟ್ರೋ ರೈಲು ನಿಗಮ (ಡಿಎಂಆರ್‌ಸಿ) ಅಧಿಕಾರಿಗಳ ಪ್ರಕಾರ, ದೆಹಲಿ ಮೆಟ್ರೋದ ಟ್ಯಾಗೋರ್ ಗಾರ್ಡನ್-ಮೋತಿ ನಗರ ಮಾರ್ಗದಲ್ಲಿ ಈ ಆತ್ಮಹತ್ಯೆ ಘಟನೆ ನಡೆದಿದೆ.ಮೃತದೇಹವನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. 

ಈ ಹಿಂದೆ  ಸೆಪ್ಟೆಂಬರ್ ತಿಂಗಳಲ್ಲಿ 19 ವರ್ಷದ ಮಹಿಳೆಯೊಬ್ಬರು ನೋಯ್ಡಾ ಸಿಟಿ ಸೆಂಟರ್ ಮೆಟ್ರೋ ನಿಲ್ದಾಣದಲ್ಲಿ ಚಲಿಸುತ್ತಿದ್ದ ಮೆಟ್ರೋ ರೈಲಿನ ಮುಂಭಾಗ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದಳು.ಘಟನೆಯಲ್ಲಿ ಆಕೆಯ ತಲೆಗೆ ಗಂಭೀರ ಗಾಯಗಳಾಗಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಇದರಿಂದ ಕೆಲಕಾಲ ಮೆಟ್ರೋ ಸೇವೆಗೆ ಅಡ್ಡಿ ಉಂಟಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com