ದಿಮಾಪುರ: ನಾಗಾಲ್ಯಾಂಡ್‌ನ ದಿಮಾಪುರ್ ಜಿಲ್ಲೆಯ ನಹರ್ಬರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ರಾತ್ರಿ 10.45 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ನಾಗ ಸಮುದಾಯವಲ್ಲದ ಜನರು ವಾಸಿಸುವ ಹುಲ್ಲಿನ ಮನೆಗಳ ಸಾಲುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿದರು.
ದೀಪಾವಳಿ ಆಚರಣೆ ವೇಳೆ ಪಟಾಕಿ ಸಿಡಿಸಿದ್ದರಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಬೆಂಕಿಯಿಂದಾಗಿ ಸುಮಾರು 50 ಕುಟುಂಬಗಳು ತೊಂದರೆಗೀಡಾಗಿವೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿ ತಿಳಿಸಿದ್ದಾರೆ.
ಆರು ಅಗ್ನಿಶಾಮಕ ವಾಹನಗಳು ಸುಮಾರು ಎರಡು ಗಂಟೆಗಳ ಕಾರ್ಯಾಚರಣೆಯ ನಂತರ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ.
ಆದರೆ, ಅಗ್ನಿ ಅವಘಡಕ್ಕೆ ನಿಖರ ಕಾರಣ ತನಿಖೆಯ ನಂತರವೇ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರ ಶವಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
Advertisement