ಶಾಲಾ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ಸೇನಾಧಿಕಾರಿಯಂತೆ ಪೋಸ್ ಕೊಟ್ಟಿದ್ದ ವ್ಯಕ್ತಿ ಬಂಧನ!

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮತ್ತು ಸೇನಾ ಅಧಿಕಾರಿಯಂತೆ ಪೋಸ್ ಕೊಟ್ಟಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದುಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮತ್ತು ಸೇನಾ ಅಧಿಕಾರಿಯಂತೆ ಪೋಸ್ ಕೊಟ್ಟಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದುಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿಯನ್ನು ಜಿಲ್ಲೆಯ ರಾಮಗಢ ಪ್ರದೇಶದ ಶಾಮ್ ಲಾಲ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುವತಿ ನೀಡಿದ ದೂರಿನ ಪ್ರಕಾರ, ಆರ್ಮಿ ಕರ್ನಲ್ ಎಂದು ಪೋಸ್ ಕೊಟ್ಟಿದ್ದ ಲಾಲ್ 10ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಮತ್ತು ಆಕೆಯ ಸಹೋದರನನ್ನು ಉಧಂಪುರದಿಂದ ವಿಜಯಪುರಕ್ಕೆ ಎನ್‌ಸಿಸಿಗೆ ಸೇರಿಸುವುದಾಗಿ ಸುಳ್ಳು ಭರವಸೆ ನೀಡಿ ಕರೆದೊಯ್ದಿದ್ದರು.

ಆರೋಪಿಯು ವಿಜಯಪುರ-ರಾಮಗಢ ರಸ್ತೆಯಲ್ಲಿ ಆಕೆಯ ಓಡುವ ಸಾಮರ್ಥ್ಯವನ್ನು ಪರೀಕ್ಷಿಸಿದ್ದಾರೆ. ನಂತರ ಮಧ್ಯರಾತ್ರಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿನಿ ಸಹಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಅವರು ಹೇಳಿದರು.

ಎಫ್‌ಐಆರ್‌ ದಾಖಲಿಸಿಕೊಂಡ ಪೊಲೀಸರು ಕೂಡಲೇ ಕ್ರಮ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿಸಿದರು. ಈ ಕುರಿತು ತನಿಖೆ ನಡೆಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com