ಪ್ರಧಾನಿ ಮೋದಿ ಕುರಿತು ತಪ್ಪು ಹೇಳಿಕೆ: ಆಯೋಗದಿಂದ ಪ್ರಿಯಾಂಕ ವಾಧ್ರಗೆ ನೊಟೀಸ್

ಪ್ರಧಾನಿ ಮೋದಿ ವಿರುದ್ಧ ಸುಳ್ಳು ಹಾಗೂ ದೃಢಪಡದ ಹೇಳಿಕೆಗಳನ್ನು ನೀಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ. 
ಪ್ರಿಯಾಂಕ ಗಾಂಧಿ ವಾದ್ರಾ
ಪ್ರಿಯಾಂಕ ಗಾಂಧಿ ವಾದ್ರಾ

ನವದೆಹಲಿ: ಪ್ರಧಾನಿ ಮೋದಿ ವಿರುದ್ಧ ಸುಳ್ಳು ಹಾಗೂ ದೃಢಪಡದ ಹೇಳಿಕೆಗಳನ್ನು ನೀಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ. 

ಮಧ್ಯಪ್ರದೇಶದ ಚುನಾವಣೆಯ ರ್ಯಾಲಿಯಲ್ಲಿ ಮಾತನಾಡಿದ್ದ ಪ್ರಿಯಾಂಕ ವಾಧ್ರ, ಸುಳ್ಳು ಹಾಗೂ ದೃಢಪಡದ ಆರೋಪಗಳನ್ನು ಮಾಡಿದ್ದಾರೆ ಎಂದು ಬಿಜೆಪಿ ಆಯೋಗಕ್ಕೆ ದೂರು ನೀಡಿತ್ತು.

ದೂರಿನ ಹಿನ್ನೆಲೆಯಲ್ಲಿ ಆಯೋಗ ಪ್ರಿಯಾಂಕ ವಾಧ್ರ ಗೆ ನೋಟಿಸ್ ಜಾರಿ ಮಾಡಿದ್ದು, ಗುರುವಾರ ರಾತ್ರಿ 8 ಗಂಟೆ ವೇಳೆಗೆ ಸ್ಪಷ್ಟನೆ ನೀಡಬೇಕು ಎಂದು ಸೂಚಿಸಿದೆ 

ಮೋದಿ ಸರ್ಕಾರ ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಿದ್ದಾರೆ ಎಂದು ಪ್ರಿಯಾಂಕ ವಾಧ್ರ ಆರೋಪಿಸಿದ್ದರು. ಪ್ರಧಾನಿ ಮೋದಿ ಪಿಎಸ್ ಯು ಬಿಹೆಚ್ಇಎಲ್ ನ್ನು ತಮ್ಮ ಕೈಗಾರಿಕಾ ಸ್ನೇಹಿತರಿಗೆ ನೀಡಿದ್ದಾರೆ ಎಂದು ಪ್ರಿಯಾಂಕ ವಾಗ್ದಾಳಿ ನಡೆಸಿದ್ದರು. 
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com