ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಹಿಂಪಡೆಯಿರಿ: ಕಾಂಗ್ರೆಸ್ ಗೆ ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಒತ್ತಾಯ

ಕರ್ನಾಟಕದಲ್ಲಿ ಹಿಜಾಬ್ ನಿಷೇಧವನ್ನು ಹಿಂಪಡೆಯುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವಂತೆ  ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಮಂಗಳವಾರ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ. 
ಖರ್ಗೆ, ಒಮರ್ ಅಬ್ದುಲ್ಲಾ
ಖರ್ಗೆ, ಒಮರ್ ಅಬ್ದುಲ್ಲಾ

ಶ್ರೀನಗರ: ಕರ್ನಾಟಕದಲ್ಲಿ ಹಿಜಾಬ್ ನಿಷೇಧವನ್ನು ಹಿಂಪಡೆಯುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವಂತೆ  ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಮಂಗಳವಾರ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ. 
  
ಬಾರಾಮುಲ್ಲಾದಲ್ಲಿ ಪಕ್ಷದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ವೇಳೆ ಶಿರವಸ್ತ್ರ ಧರಿಸುವುದಕ್ಕೆ ನಿಷೇಧ ಹೇರಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಆದೇಶದ ವಿಚಾರದಲ್ಲಿ ಸರ್ಕಾರ ಇದರಲ್ಲಿ ಏಕೆ ಮಧ್ಯಪ್ರವೇಶಿಸಬೇಕು? ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಇಂತಹ ಆದೇಶ ಮಾಡಲಾಗಿದೆ. ಈ ಹಿಂದೆ ಕರ್ನಾಟಕದಲ್ಲಿ ಇಂತಹ ಆದೇಶಗಳೆಲ್ಲಾ ಜಾರಿಯಾದಾಗ ಬಿಜೆಪಿ ಸರ್ಕಾರ ಇತ್ತು. ಹೀಗಾಗಿ ನಮ್ಮಗೆ ಆಶ್ಚರ್ಯ ಏನಿಸಿರಲಿಲ್ಲ. ಆದರೆ, ಈಗ  ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಇಂತಹ ನಿರ್ಧಾರಗಳನ್ನು ತೆಗೆದುಕೊಂಡಿರುವುದು ಬೇಸರದ ಸಂಗತಿ, ಇದು ಅತ್ಯಂತ ದುರದೃಷ್ಟಕರ ಎಂದರು. 

"ಕರ್ನಾಟಕದಲ್ಲಿ ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸುವಂತೆ, ಆ ಆದೇಶವನ್ನು ಹಿಂತೆಗೆದುಕೊಳ್ಳುವ ಕೆಲಸ ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ವಿನಂತಿಸುತ್ತೇನೆ ಎಂದರು. 

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಬ್ದುಲ್ಲಾ, ಬಿಜೆಪಿ ಜನರನ್ನು ಎದುರಿಸಲು ಸಿದ್ಧವಿಲ್ಲ.  ವಿಧಾನಸಭಾ ಚುನಾವಣೆ ಬಿಡಿ, ಮುನ್ಸಿಪಲ್ ಚುನಾವಣೆ ಕೂಡ ಮುಂದೂಡಲ್ಪಟ್ಟಿದೆ, ಶ್ರೀನಗರದಲ್ಲಿ ಪುರಸಭೆ ಈಗ ಅಸ್ತಿತ್ವದಲ್ಲಿಲ್ಲ, ಜಮ್ಮು ಪುರಸಭೆಯ ಅವಧಿಯೂ ಮುಗಿಯುತ್ತಿದೆ, ಜನವರಿ ವೇಳೆಗೆ ಎಲ್ಲಾ ಪುರಸಭೆಗಳು ತಮ್ಮ ಅವಧಿಯನ್ನು ಪೂರ್ಣಗೊಳಿಸಲಿವೆ. ಜನವರಿ ನಂತರ ಪಂಚ ಮತ್ತು ಸರಪಂಚ್‌ಗಳು ಅಸ್ತಿತ್ವ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com