ಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿ ಬಿದ್ದ ಬಸ್, 25ಕ್ಕೂ ಹೆಚ್ಚು ಮಂದಿ ದುರ್ಮರಣ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದಿದ್ದು, ಪರಿಣಾಮ 25ಕ್ಕೂ ಹೆಚ್ಚು ಮಂದಿ ದುರ್ಮರಣವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ಕಂದಕಕ್ಕೆ ಉರುಳಿ ಬಿದ್ದಿರುವ ಬಸ್.
ಕಂದಕಕ್ಕೆ ಉರುಳಿ ಬಿದ್ದಿರುವ ಬಸ್.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದಿದ್ದು, ಪರಿಣಾಮ 25ಕ್ಕೂ ಹೆಚ್ಚು ಮಂದಿ ದುರ್ಮರಣವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ಇಂದು ಬೆಳಿಗ್ಗೆ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

JK02CN-6555 ನೋಂದಣಿ ಸಂಖ್ಯೆ ಹೊಂದಿರುವ ಬಸ್ಸಿನಲ್ಲಿ ಸುಮಾರು 55 ಮಂದಿ ಪ್ರಯಾಣಿಕರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ,

ಬಸ್ಸು ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರುಂಗಲ್-ಅಸ್ಸಾರ್ ಬಳಿ ಸಂಚರಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸುಮಾರು 300 ಅಡಿ ಆಳದ ಕಂದಕಕ್ಕೆ ಬಿದ್ದು ಅವಘಡ ಸಂಭವಿಸಿದೆ.

 ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಹಲವ ಸ್ಥಿತಿ ಗಂಭೀರವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಘಳು ತಿಳಿಸಿದ್ದಾರೆ.

ದುರ್ಘಟನೆಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

"ದೋಡಾದ ಅಸ್ಸಾರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿರುವ ಜೀವಹಾನಿಯಿಂದ ತೀವ್ರ ನೋವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಮತ್ತು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇನೆ. ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com