ರಾಜಸ್ಥಾನ ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿ ಗುರ್‌ಮೀತ್‌ ಸಿಂಗ್‌ ಕೂನರ್‌ ನಿಧನ

ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗುರ್‌ಮೀತ್‌ ಸಿಂಗ್‌ ಕೂನರ್‌ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಗುರ್‌ಮೀತ್‌ ಸಿಂಗ್‌ ಕೂನರ್‌
ಗುರ್‌ಮೀತ್‌ ಸಿಂಗ್‌ ಕೂನರ್‌
Updated on

ಜೈಪುರ: ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗುರ್‌ಮೀತ್‌ ಸಿಂಗ್‌ ಕೂನರ್‌ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಮೂತ್ರಪಿಂಡ ಸಮಸ್ಯೆ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರು ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಗುರ್‌ಮೀತ್‌ ಸಿಂಗ್‌ ಮೃತಪಟ್ಟರು ಎಂದು ವೈದ್ಯರು ಹೇಳಿದ್ದಾರೆ.

ಗುರ್‌ಮೀತ್‌ ಸಿಂಗ್‌ ಕೂನರ್‌ ನಿಧನವನ್ನು ಕಾಂಗ್ರೆಸ್‌ ಪಕ್ಷದ ಮೂಲಗಳು ಖಚಿತಪಡಿಸಿದ್ದು ಯಾವುದೇ ಹೇಳಿಕೆ ನೀಡಿಲ್ಲ.  200 ಕ್ಷೇತ್ರಗಳಿರುವ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದೆ.

ಕರಣ್‌ಪುರದ ಹಾಲಿ ಶಾಸಕರಾಗಿದ್ದ ಕೂನರ್ ಅವರನ್ನು ನವೆಂಬರ್ 12 ರಂದು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನ ಜೆರಿಯಾಟ್ರಿಕ್ ಮೆಡಿಸಿನ್ ವಾರ್ಡ್‌ಗೆ ದಾಖಲಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com