ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ: ವೈದ್ಯರ ಸಲಹೆ ಮೇರೆಗೆ ಜೈಪುರಕ್ಕೆ ಸೋನಿಯಾ ಗಾಂಧಿ ಶಿಫ್ಟ್!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಿನ ಕಳೆದಂತೆ ವಾಯು ಮಾಲಿನ್ಯ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಜೈಪುರಕ್ಕೆ ಸ್ಥಳಾಂತರಗೊಂಡಿದ್ದಾರೆಂದು ತಿಳಿದುಬಂದಿದೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಿನ ಕಳೆದಂತೆ ವಾಯು ಮಾಲಿನ್ಯ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಜೈಪುರಕ್ಕೆ ಸ್ಥಳಾಂತರಗೊಂಡಿದ್ದಾರೆಂದು ತಿಳಿದುಬಂದಿದೆ.

ದೆಹಲಿಯಲ್ಲಿ ಮಾಲಿನ್ಯದಿಂದ ಉಂಟಾಗುವ ವಿಷಪೂರಿತ ಗಾಳಿಯನ್ನು ತಪ್ಪಿಸಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಜೈಪುರಕ್ಕೆ ಸ್ಥಳಾಂತರಗೊಂಡಿದ್ದು, ಕೆಲವು ದಿನಗಳ ಕಾಲ ಅಲ್ಲಿಯೇ ತಂಗಲಿದ್ದಾರೆಂದು ವರದಿಗಳು ತಿಳಿಸಿವೆ.

ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಲು ನವೆಂಬರ್ 14 ರಂದು ಬೆಳಿಗ್ಗೆ ಶಾಂತಿವನ ಸ್ಮಾರಕವನ್ನು ತಲುಪಿದ ಸೋನಿಯಾ ಗಾಂಧಿ ಅವರು ಮಾಸ್ಕ್​ ಧರಿಸಿದ್ದರು. ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಇದ್ದರು.

ಸೋನಿಯಾ ಗಾಂಧಿ ಬಹಳ ದಿನಗಳಿಂದ ಅಸ್ತಮಾದಿಂದ ಬಳಲುತ್ತಿದ್ದು, ಈ ನಡುವಲ್ಲೇ ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಿರುವ ಹಿನ್ನೆಲೆಯಲ್ಲಿ ವಿಷಕಾರಿ ಗಾಳಿಯು ಅಪಾಯಕಾರಿ ಎಂದು ವೈದ್ಯರು ಹೇಳಿದ್ದಾರೆ, ಈ ಹಿನ್ನೆಲೆಯಲ್ಲಿ ಸೋನಿಯಾ ಅವರು ಜೈಪುರಕ್ಕೆ ಸ್ಥಳಾಂತರಗೊಂಡಿದ್ದಾರೆಂದು ಹೇಳಲಾಗುತ್ತಿದೆ.

ದೆಹಲಿಯಲ್ಲಿ ದೀಪಾವಳಿ ನಂತರ ಮಾಲಿನ್ಯ ಮತ್ತೊಮ್ಮೆ ಹೆಚ್ಚಾಗಿದೆ. ಮಂಗಳವಾರ ಬೆಳಗಿನ ಜಾವವೂ ಗಾಳಿಯ ಗುಣಮಟ್ಟ ತೀರಾ ಕಳಪೆಯಾಗಿ ದಾಖಲಾಗಿದೆ.

ದೆಹಲಿಯಲ್ಲಿ ಬೆಳಗ್ಗೆ 8 ಗಂಟೆಗೆ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 435ರಲ್ಲಿ ದಾಖಲಾಗಿದೆ. ಆದರೆ AQI ನೋಯ್ಡಾದಲ್ಲಿ 418 ಮತ್ತು ಗುರುಗ್ರಾಮ್‌ನಲ್ಲಿ 391 ತಲುಪಿದೆ.

ದೆಹಲಿ NCR ನಲ್ಲಿ ವೇಗವಾಗಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ, ಜನರು ಮತ್ತೊಮ್ಮೆ ಕಣ್ಣುಗಳಲ್ಲಿ ಕಿರಿಕಿರಿ ಮತ್ತು ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com