ಉತ್ತರಕಾಶಿ: ಸುರಂಗ ಮಾರ್ಗ ಕುಸಿತಗೊಂಡ ಸ್ಥಳದಲ್ಲಿ ಮತ್ತೆ ಭೂ ಕುಸಿತ, ಕಾರ್ಯಾಚರಣೆಗೆ ತಡೆ

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾ-ಬರ್ಕೋಟ್ ಬಳಿ ಸುರಂಗ ಕುಸಿದು 40 ಮಂದಿ ಕಾರ್ಮಿಕರು ಸಿಲುಕಿದ್ದು, ಅವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿರುವ ನಡುವಲ್ಲೇ ಮತ್ತೆ ಅದೇ ಅದೇ ಸ್ಥಳದಲ್ಲಿ ಭೂಕುಸಿತ ಸಂಭವಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾ-ಬರ್ಕೋಟ್ ಬಳಿ ಸುರಂಗ ಕುಸಿದು 40 ಮಂದಿ ಕಾರ್ಮಿಕರು ಸಿಲುಕಿದ್ದು, ಅವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿರುವ ನಡುವಲ್ಲೇ ಮತ್ತೆ ಅದೇ ಅದೇ ಸ್ಥಳದಲ್ಲಿ ಭೂಕುಸಿತ ಸಂಭವಿಸಿದೆ.

ಭೂ ಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಕಾರ್ಯಾಚರಣೆಗೆ ಮತ್ತೆ ಅಡ್ಡಿ ಉಂಟಾಗಿದೆ, ಕಾರ್ಯಾಚರಣೆ ನಡೆಸುತ್ತಿರುವ ಸ್ಥಳದಲ್ಲೇ ಭೂ ಕುಸಿತ ಸಂಭವಿಸುತ್ತಿರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ.

ಕಾರ್ಮಿಕರನ್ನು ರಕ್ಷಣೆ ಮಾಡಲು ಮಂಗಳವಾರ ರಾತ್ರಿ ಪೈಪ್ ಲೈನ್ ಅಳವಡಿಸಲು ಕಾರ್ಯಾಚರಣೆ ನಡೆಸುತ್ತಿರುವ ವೇಳೆ ಭೂ ಕುಸಿತ ಉಂಟಾಗಿದ್ದು, ಇದರಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ಸಿಬ್ಬಂದಿಗಳು ಪ್ರಾಣ ಉಳಿಸಿಕೊಳ್ಳಲು ಸುರಂಗದ ಒಳಗಿನಿಂದ ಓಡಿ ಬಂದಿದ್ದಾರೆ. ಈ ವೇಳೆ ಕಾಲ್ತುಳಿತ ಉಂಟಾಗಿ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com