ಹೈದ್ರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಬಿಡುಗಡೆಗೊಳಿಸಿದರು.
ನಂತರ ಮಾತನಾಡಿದ ಖರ್ಗೆ, ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ‘ಬಂಗಾರು ತೆಲಂಗಾಣದ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಒಟ್ಟು ಆರು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಘೋಷಿಸಿದರು.
ತೆಲಂಗಾಣವನ್ನು ರಚಿಸಿದ್ದೇವೆ ಮತ್ತು ಕಮಿಷನ್ ರಾಜ, ಬಿಆರ್‌ಎಸ್ ಲೂಟಿಯಿಂದಾಗಿ ಚಳವಳಿಯ ಹೋರಾಟ ಮತ್ತು ತ್ಯಾಗ ವ್ಯರ್ಥವಾಗಲು ನಾವು ಬಿಡುವುದಿಲ್ಲ ಎಂದು ಗುಡುಗಿದರು. 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30 ರಂದು ಮತದಾನ ನಡೆಯಲ್ಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.
Advertisement