ಮಧ್ಯ ಪ್ರದೇಶ ಚುನಾವಣೆ: 340 ಕೋಟಿ ರೂ. ಮೌಲ್ಯದ ನಗದು, ಡ್ರಗ್ಸ್, ಚಿನ್ನಾಭರಣ ವಶ
ಭೋಪಾಲ್: ಮಧ್ಯಪ್ರದೇಶದಲ್ಲಿ ಅಕ್ಟೋಬರ್ 9 ರಂದು ರಾಜ್ಯ ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೂ ರೂ. 40.18 ಕೋಟಿ ನಗದು, 17 ಕೋಟಿಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯಗಳು, ಮದ್ಯ, ಚಿನ್ನಾಭರಣ ಸೇರಿದಂತೆ ಒಟ್ಟು 280 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯದ 230 ವಿಧಾನಸಭಾ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆದಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನುಪಮ್ ರಾಜನ್, ನೀತಿ ಸಂಹಿತೆ ಜಾರಿಯಾದಾಗಿನಿಂದ ರಾಜ್ಯಾದ್ಯಂತ ಜಾರಿ ಸಂಸ್ಥೆಗಳು ನಿರಂತರ ಕ್ರಮ ಕೈಗೊಂಡಿವೆ. ವಿವಿಧ ತನಿಖಾ ತಂಡಗಳು ಹಾಗೂ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 339.95 ಕೋಟಿ ರೂ. ಮೌಲ್ಯದ ಅಕ್ರಮ ಮದ್ಯ, ಮಾದಕ ದ್ರವ್ಯಗಳು, ನಗದು, ಅಮೂಲ್ಯವಾದ ಲೋಹಗಳು, ಚಿನ್ನ, ಬೆಳ್ಳಿ, ಆಭರಣಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ಅವರು ಹೇಳಿದರು.
ಅಕ್ಟೋಬರ್ 9 ರಿಂದ ನವೆಂಬರ್ 16 ರವರೆಗೆ ಈ ಜಂಟಿ ತಂಡಗಳು 40.18 ಕೋಟಿ ರೂಪಾಯಿ ನಗದು, 65.56 ಕೋಟಿ ರೂಪಾಯಿ ಮೌಲ್ಯದ 34.68 ಲಕ್ಷ ಲೀಟರ್ ಅಕ್ರಮ ಮದ್ಯ, 17.25 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳು, 92.76 ಕೋಟಿ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಮತ್ತು 124. 18 ಕೋಟಿ ಮೊತ್ತದ ವಸ್ತುಗಳನ್ನು ವಶಕ್ಕೆ ಪಡೆದಿದೆ ಎಂದು ರಾಜನ್ ತಿಳಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ