ಇಂದೋರ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಎನ್‌ಆರ್‌ಐ ಮಹಿಳೆಗೆ ಕಿರುಕುಳ: ದೂರು ದಾಖಲು
ಇಂದೋರ್: ರಾಜಸ್ಥಾನದ ಉದಯಪುರದಿಂದ ಇಂದೋರ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಅನಿವಾಸಿ ಭಾರತೀಯ ಮಹಿಳೆಯೊಬ್ಬರು, ಪ್ರಯಾಣದ ವೇಳೆ ತಮಕೆ ಕಿರುಕುಳ ನೀಡಲಾಗಿದೆ ಎಂದು ಆರೋಪಿ ಇಂದೋರ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವಿಮಾನದಲ್ಲಿ ಸಹ ಪ್ರಯಾಣಿಕರಿಂದ ಕಿರುಕುಳಕ್ಕೊಳಗಾದ ಮಹಿಳೆ, ಇಂದೋರ್ ತಲುಪಿದ ನಂತರ ನಗರದ ಏರೋಡ್ರೋಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹೆಚ್ಚುವರಿ ಉಪ ಪೊಲೀಸ್ ಕಮಿಷನರ್ ರಾಜೇಶ್ ದಂಡೋಟಿಯಾ ಮಾತನಾಡಿ, "ಅಮೆರಿಕದಿಂದ ಉದಯಪುರ ಮೂಲಕ ಇಂದೋರ್ ತಲುಪಿದ ಎನ್‌ಆರ್‌ಐ ಮಹಿಳೆಯೊಬ್ಬರು ದೂರು ನೀಡಿದ್ದು, ಗುರುವಾರ ವಿಮಾನದಲ್ಲಿ ವ್ಯಕ್ತಿಯೊಬ್ಬರು ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿರುವುದಾಗಿ ತಿಳಿಸಿದ್ದಾರೆ.
ಮಹಿಳೆ ಅಮೆರಿಕದಲ್ಲಿ ವಾಸವಾಗಿದ್ದು, ಅಲ್ಲಿ ಟ್ರೈನಿ ಪೈಲಟ್ ಆಗಿದ್ದಾರೆ. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಅಪರಿಚಿತ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 354 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿಯ ಬಗ್ಗೆ ಏರ್‌ಲೈನ್‌ನಿಂದ ಮಾಹಿತಿ ಕೇಳಲಾಗಿದ್ದು, ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ