ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಸಾವು, ಮೂವರು ಆರೋಪಿಗಳ ಬಂಧನ

ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಸಾವಿಗೀಡಾಗಿದ್ದು, ಓರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಕಲಿ ಮದ್ಯ ಮಾರಾಟ ಆರೋಪದ ಮೇಲೆ ಇದುವರೆಗೆ ಮೂವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸೀತಾಮರ್ಹಿ: ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಸಾವಿಗೀಡಾಗಿದ್ದು, ಓರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕಲಿ ಮದ್ಯ ಮಾರಾಟ ಆರೋಪದ ಮೇಲೆ ಇದುವರೆಗೆ ಮೂವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ನಕಲಿ ಮದ್ಯ ಸೇವಿಸಿದ ಇಬ್ಬರು ವ್ಯಕ್ತಿಗಳು ಸೀತಾಮರ್ಹಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಶುಕ್ರವಾರ ಮತ್ತು ಶನಿವಾರದ ಮಧ್ಯರಾತ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿದರು. 

'ಪೊಲೀಸರು ಆಸ್ಪತ್ರೆ ತಲುಪುವಷ್ಟರಲ್ಲಾಗಲೇ, ಅವದೇಶ್ ಕುಮಾರ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದರು. ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ' ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.

ರೋಶನ್ ರೈ ಎಂದು ಗುರುತಿಸಲಾದ ಇನ್ನೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಆತನ ಕುಟುಂಬ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ. ತನಿಖೆ ವೇಳೆ ಈ ಪ್ರದೇಶದಲ್ಲಿ ಮತ್ತಿಬ್ಬರು ನಕಲಿ ಮದ್ಯ ಸೇವಿಸಿ ಮೃತಪಟ್ಟಿರುವುದು ಪೊಲೀಸರಿಗೆ ತಿಳಿದು ಬಂದಿದೆ.

'ಈ ಪ್ರದೇಶದಲ್ಲಿ ಇನ್ನಿಬ್ಬರು ಸಾವಿಗೀಡಾಗಿರುವ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಪೊಲೀಸರಿಗೆ ತಿಳಿಸದೆ ಅವರ ಶವಗಳನ್ನು ಸುಟ್ಟುಹಾಕಲಾಗಿದೆ' ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಆರೋಪಿಯಿಂದ ಸುಮಾರು 90 ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2016 ರಲ್ಲಿ ನಿತೀಶ್ ಕುಮಾರ್ ಸರ್ಕಾರವು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿತು. ಆದಾಗ್ಯೂ, ರಾಜ್ಯದಲ್ಲಿ ಮದ್ಯದ ಕಳ್ಳಸಾಗಣೆ ಮತ್ತು ನಕಲಿ ಮದ್ಯ ಮಾರಾಟ ಘಟನೆಗಳು ವರದಿಯಾಗುತ್ತಲೇ ಇವೆ.

ಈ ವರ್ಷದ ಏಪ್ರಿಲ್‌ನಲ್ಲಿ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ 30ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com