ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ನಿಂತಿದ್ದ ಕಾರಿಗೆ ಬಿಎಂಡಬ್ಲ್ಯು ಡಿಕ್ಕಿ; ನಾಲ್ವರು ಪಾದಚಾರಿಗಳಿಗೆ ಗಾಯ

ವೇಗವಾಗಿ ಬಂದ ಬಿಎಂಡಬ್ಲ್ಯು ಕಾರು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗಳು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ನವದೆಹಲಿ: ವೇಗವಾಗಿ ಬಂದ ಬಿಎಂಡಬ್ಲ್ಯು ಕಾರು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗಳು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಗಾಯಾಳುಗಳನ್ನು ಯಶವಂತ ನಲ್ವಾಡೆ (58), ದೇವರಾಜ್ ಮಧುಕರ್ ಗಾರ್ಗೇಟ್ (50), ಮನೋಹರ್ (62) ಮತ್ತು ನಿತಿನ್ ಕೊಲ್ಹಾಪುರಿ ಎಂದು ಗುರುತಿಸಲಾಗಿದ್ದು, ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಎರಡು ವಾಹನಗಳಾದ ಬಿಎಂಡಬ್ಲ್ಯು ಮತ್ತು ಸುಜುಕಿ ಸಿಯಾಜ್ ಜಖಂಗೊಂಡ ಸ್ಥಿತಿಯಲ್ಲಿ ಕಂಡುಬಂದಿವೆ. ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಬಿಎಂಡಬ್ಲ್ಯು ವಾಹನ ರಸ್ತೆ ಬದಿಯಲ್ಲಿ ನಿಂತಿದ್ದ ಸಿಯಾಜ್ ಕಾರಿಗೆ ಡಿಕ್ಕಿ ಹೊಡೆದ ನಂತರ ನಾಲ್ವರು ಪಾದಚಾರಿ ದಾರಿಹೋಕರಿಗೂ ಡಿಕ್ಕಿ ಹೊಡೆದಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಚಂದನ್ ಚೌಧರಿ ಹೇಳಿದ್ದಾರೆ.

ಗಾಯಾಗಳುಗಳನ್ನು  ಏಮ್ಸ್  ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಘಟನೆ ಸಂಬಂಧ ಐಸಿಸಿ ಸೆಕ್ಷನ್ 279 (ಅಪವೇಗದ ಚಾಲನೆ) ಮತ್ತು 337 (ಮಾನವ ಜೀವಕ್ಕೆ ಅಪಾಯವನ್ನುಂಟುಮಾಡುವ ಯಾವುದೇ ದುಷ್ಕೃತ್ಯ ಅಥವಾ ನಿರ್ಲಕ್ಷ್ಯದಿಂದ ಯಾವುದೇ ವ್ಯಕ್ತಿಗೆ ನೋವುಂಟುಮಾಡುವುದು) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಆದರೆ, ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಡಿಸಿಪಿ ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com