ತಮಿಳುನಾಡಿನ 10 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರಿ ಮಳೆ: ಭಾರತೀಯ ಹವಾಮಾನ ಇಲಾಖೆ

ಮುಂದಿನ ಮೂರು ದಿನಗಳಲ್ಲಿ ತಮಿಳುನಾಡಿನ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.
ತಮಿಳುನಾಡಿನಲ್ಲಿ ಭಾರಿ ಮಳೆ
ತಮಿಳುನಾಡಿನಲ್ಲಿ ಭಾರಿ ಮಳೆ

ಚೆನ್ನೈ: ಮುಂದಿನ ಮೂರು ದಿನಗಳಲ್ಲಿ ತಮಿಳುನಾಡಿನ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.

ಹವಾಮಾನ ಬದಲಾವಣೆಯಿಂದಾಗಿ ತಮಿಳುನಾಡಿನ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಹವಾಮಾನ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದ್ದು, ತಮಿಳುನಾಡಿನ ಕನ್ಯಾಕುಮಾರಿ, ತಿರುನಲ್ವೇಲಿ, ತೆಂಕಶಿ ಮತ್ತು ಥೇಣಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೆ ರಾಮನಾಥಪುರಂ, ವಿರುದುನಗರ, ತೂತುಕುಡಿ, ಮಧುರೈ, ದಿಂಡಿಗಲ್, ತಿರುಪ್ಪೂರ್, ಕೊಯಮತ್ತೂರು, ನೀಲಗಿರಿ, ತಿರುವಳ್ಳೂರು, ರಾಣಿಪೇಟ್, ಕಾಂಚೀಪುರಂ, ರಾಜದಾನಿ ಚೆನ್ನೈ, ಚೆಂಗಲ್ಪಟ್ಟು, ನಾಗಪಟ್ಟಣಂ, ಮೈಲಾಡುತುರೈ ಮತ್ತು ತಿರುವರೂರ್ ಮತ್ತು ಕಾರೈಕಲ್ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಮಂಗಳವಾರ ಮಧ್ಯಾಹ್ನ 1.30 ಕ್ಕೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ನವೆಂಬರ್ 22 ರಂದು ತಮಿಳುನಾಡಿನ ಕನ್ಯಾಕುಮಾರಿ, ತಿರುನಲ್ವೇಲಿ ಮತ್ತು ತೆಂಕಶಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು ಮತ್ತು ಕಾರೈಕಲ್ ಪ್ರದೇಶದ ರಾಮನಾಥಪುರಂ, ತೂತುಕುಡಿ, ಥೇಣಿ, ದಿಂಡಿಗಲ್, ಪುದುಕೊಟ್ಟೈ, ತಂಜಾವೂರು, ತಿರುವರೂರು, ನಾಗಪಟ್ಟಿಣಂ ಮತ್ತು ಮೈಲಾಡುತುರೈ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ತಮಿಳುನಾಡಿನ ನೀಲಗಿರಿ, ಕೊಯಮತ್ತೂರು, ತಿರುಪುರ್, ಥೇಣಿ ಮತ್ತು ದಿಂಡಿಗಲ್ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ಇಂದು ಕಾಂಚೀಪುರಂ ಜಿಲ್ಲೆಯಲ್ಲಿ ಸಾಧಾರಣ ಬಿಸಿಲು ಇತ್ತು, ಆದರೆ ಇದ್ದಕ್ಕಿದ್ದಂತೆ ಕಪ್ಪು ಮೋಡವು ಸುತ್ತುವರೆದು ಭಾರಿ ಮಳೆ ಆರಂಭವಾಗಿದೆ. ಕಾಂಚಿಪುರಂ ಹೊರತಾಗಿ, ವಾಲಾಜಾಬಾದ್, ಉತ್ತಿರಮೇರೂರ್, ಚೆನ್ನೈ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಂತಹ ಹಲವೆಡೆ ಮಂಗಳವಾರ 30 ನಿಮಿಷಕ್ಕೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ ಎಂದು ಚೆನ್ನೈನ ಆರ್‌ಎಂಸಿ ತಿಳಿಸಿದೆ.

ನವೆಂಬರ್ 22 ಮತ್ತು 23 ರಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆ ಅಂದರೆ 115.6 ಮಿಮೀ ನಿಂದ 204.4 ಮಿಮೀ ವರೆಗೂ ಮಳೆಯಾಗುವ ಸಾಧ್ಯತೆ ಇದ್ದು, ಹೀಗಾಗಿ ಇಲ್ಲಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಲಘು/ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿಕೆಯಲ್ಲಿ ಸೇರಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com