ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹತ್ಯೆಗೆ ದಾವೂದ್ ಗ್ಯಾಂಗ್ ಗುತ್ತಿಗೆ ನೀಡಿದೆ ಎಂದು ಬೆದರಿಕೆ ಕರೆ; ವ್ಯಕ್ತಿ ಬಂಧನ

ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡಲು ಪಾತಕಿ ದಾವೂದ್ ಇಬ್ರಾಹಿಂ ತಂಡದ ಸದಸ್ಯರು ತನಗೆ ಗುತ್ತಿಗೆ ನೀಡಿದ್ದಾರೆ ಎಂದು ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡಲು ಪಾತಕಿ ದಾವೂದ್ ಇಬ್ರಾಹಿಂ ತಂಡದ ಸದಸ್ಯರು ತನಗೆ ಗುತ್ತಿಗೆ ನೀಡಿದ್ದಾರೆ ಎಂದು ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ. 

ಬಂಧಿತನನ್ನು 29 ವರ್ಷದ ಕಮ್ರಾನ್ ಅಮೀರ್ ಖಾನ್ ಎಂದು ಗುರುತಿಸಲಾಗಿದ್ದು, ಮುಂಬೈನ ಸಿಯೋನ್ ಈಸ್ಟ್ ನಿವಾಸಿ. ಈತ ಮಂಗಳವಾರ ಈ ಬೆದರಿಕೆ ಕರೆ ಮಾಡಿದ್ದು, ನಂತರ ಅದು ಸುಳ್ಳು ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶದ ಸಿಎಂ ಆದಿತ್ಯನಾಥ್ ಅವರ ಕೊಲೆ ಮಾಡುವುದಾಗಿ ಬೆದರಿಕೆ ಕರೆ ಮಾಡಿದ್ದಕ್ಕಾಗಿ ಈ ಹಿಂದೆಯೂ ಆರೋಪಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

'ಆರೋಪಿ ಮಂಗಳವಾರ ಮುಂಬೈ ಪೊಲೀಸ್ ಮುಖ್ಯ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾನೆ. ಈ ವೇಳೆ ಆತ ಸರ್ಕಾರಿ ಜೆಜೆ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ದಾವೂದ್ ಇಬ್ರಾಹಿಂನ ಗ್ಯಾಂಗ್ ಸದಸ್ಯರು ತನಗೆ ಗುತ್ತಿಗೆ ನೀಡಿದ್ದಾರೆ ಎಂದು ಹೇಳಿದ್ದಾಗಿ' ಅವರು ಹೇಳಿದರು.

ಆರೋಪಿಯು ಜೆಜೆ ಆಸ್ಪತ್ರೆಯಲ್ಲಿದ್ದುಕೊಂಡೇ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾನೆ ಮತ್ತು ರೋಗಿಗಳು ಹೆಚ್ಚಿದ್ದರಿಂದ ಸುದೀರ್ಘ ಸರತಿ ಸಾಲಿನಿಂದಾಗಿ ವೈದ್ಯಕೀಯ ತಪಾಸಣೆ ವಿಳಂಬವಾಗಿದೆ. ಈ ವೇಳೆ ಆತ ಕಂಟ್ರೋಲ್‌ ರೂಂಗೆ ಕರೆ ಮಾಡಿದ್ದಾನೆ ಎಂದು ನಂತರ ತಿಳಿದುಬಂದಿದೆ.

ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು, ಈ ಹಿಂದೆಯೂ ಸುಳ್ಳು ಬೆದರಿಕೆ ಕರೆ ಪ್ರಕರಣದಲ್ಲಿ ಬಂಧಿತನಾಗಿದ್ದ ಎಂದು ಹೇಳಲಾಗಿದೆ.
ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 505 (2) ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com