ಕ್ರಿಕೆಟ್ ಪಂದ್ಯ ವೀಕ್ಷಿಸಲು ತೆರಳುವ ಪ್ರಧಾನಿ ಮೋದಿ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿಲ್ಲ; ಪ್ರಿಯಾಂಕಾ ಗಾಂಧಿ

ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ಭಾರತ ಗೆದ್ದರೆ ಸ್ವಲ್ಪಮಟ್ಟಿನ ಶ್ರೇಯಸ್ಸು ಪಡೆಯುವ ನಿರೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಕೆಟ್ ಪಂದ್ಯ ವೀಕ್ಷಿಸಲು ಅಹಮದಾಬಾದ್‌ಗೆ ತೆರಳಿದ್ದರು. ಆದರೆ, ಬಿಕ್ಕಟ್ಟಿನ ಕಾರಣ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಮಾತ್ರ ಭೇಟಿ ನೀಡಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಹೇಳಿದ್ದಾರೆ.
ರಾಜಸ್ಥಾನ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ
ರಾಜಸ್ಥಾನ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ

ಜೈಪುರ: ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ಭಾರತ ಗೆದ್ದರೆ ಸ್ವಲ್ಪಮಟ್ಟಿನ ಶ್ರೇಯಸ್ಸು ಪಡೆಯುವ ನಿರೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಕೆಟ್ ಪಂದ್ಯ ವೀಕ್ಷಿಸಲು ಅಹಮದಾಬಾದ್‌ಗೆ ತೆರಳಿದ್ದರು. ಆದರೆ, ಬಿಕ್ಕಟ್ಟಿನ ಕಾರಣ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಮಾತ್ರ ಭೇಟಿ ನೀಡಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಹೇಳಿದ್ದಾರೆ.

ನವೆಂಬರ್ 25 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಸ್ಥಾನದ ಜೈಪುರ ಜಿಲ್ಲೆಯ ಶಹಪುರದಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೋದಿ ಅವರು ಫಕೀರರೆಂದು ಹೇಳಿಕೊಳ್ಳುತ್ತಾರೆ ಮತ್ತು ಅವರ ಆಡಳಿತದಲ್ಲಿ ಬಿಜೆಪಿ ಹೇಗೆ ಶ್ರೀಮಂತ ಪಕ್ಷವಾಯಿತು ಎಂದು ಪ್ರಶ್ನಿಸಿದರು.

ಸುಮಾರು ಏಳು ತಿಂಗಳಿನಿಂದ ಮಣಿಪುರ ಜನಾಂಗೀಯ ಹಿಂಸಾಚಾರದಲ್ಲಿ ಮುಳುಗಿದೆ. ಆದರೆ, ಪ್ರಧಾನಿ ಅಲ್ಲಿಗೆ ಹೋಗಲಿಲ್ಲ. ಬದಲಾಗಿ, ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯವನ್ನು ವೀಕ್ಷಿಸಲು ಅವರು ಅಹಮದಾಬಾದ್‌ಗೆ ಭೇಟಿ ನೀಡಿದರು ಎಂದು ದೂರಿದರು.

'ಇತ್ತೀಚಿನ ವಿಶ್ವಕಪ್‌ನಲ್ಲಿ ನಮ್ಮ ತಂಡವು ಅವರ ಕಠಿಣ ಪರಿಶ್ರಮದಿಂದ ಫೈನಲ್ ತಲುಪಿತ್ತು. ತಂಡವು ಗೆದ್ದರೆ ಅವರಿಗೆ ಸ್ವಲ್ಪ ಕ್ರೆಡಿಟ್ ಸಿಗಬಹುದು ಎನ್ನುವ ಕಾರಣಕ್ಕಾಗಿಯೇ ಮೋದಿಜಿ ಅಲ್ಲಿಗೆ ತಲುಪಿದರು. ಪ್ರಧಾನಿ ಹೆಮ್ಮೆ ಮತ್ತು ಗೌರವ ಎನಿಸುವ ಅಂತಹ ಸ್ಥಳಗಳಿಗೆ ಮಾತ್ರ ಹೋಗುತ್ತಾರೆ. ಆದರೆ, ಬಿಕ್ಕಟ್ಟಿನ ಪರಿಸ್ಥಿತಿಯಿಂದ ದೂರವಿರುತ್ತದೆ' ಎಂದು ಆರೋಪಿಸಿದರು.

ಪ್ರಧಾನಿ ಮೋದಿ ಮತ್ತು ಕೇಂದ್ರವು ದೊಡ್ಡ ಕೈಗಾರಿಕೋದ್ಯಮಿಗಳ ಸಾಲವನ್ನು ಮನ್ನಾ ಮಾಡಿದೆ. ಆದರೆ, ಬಡವರನ್ನು ನಿರ್ಲಕ್ಷಿಸಿದೆ. ರಾಜಕೀಯದೊಂದಿಗೆ ಧರ್ಮವನ್ನು ಬೆರೆಸುವುದು ಪಾಪ ಎಂದು ಅವರು ಹೇಳಿದರು.

ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ದೊಡ್ಡ ಕೈಗಾರಿಕೋದ್ಯಮಿಗಳಿಗಾಗಿ ಕೆಲಸ ಮಾಡುತ್ತಿದ್ದರೆ, ರಾಜಸ್ಥಾನದ ಕಾಂಗ್ರೆಸ್ ಸರ್ಕಾರವು ವಿಶೇಷ ಶಿಬಿರಗಳನ್ನು ನಡೆಸುವ ಮೂಲಕ ಹಣದುಬ್ಬರದಿಂದ ಜನರಿಗೆ ಪರಿಹಾರವನ್ನು ಒದಗಿಸಿದೆ ಎಂದರು.

ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಅಭ್ಯರ್ಥಿ ಮನೀಶ್ ಯಾದವ್ ಮತ್ತು ಇಂದ್ರಜ್ ಗುರ್ಜರ್ ಅವರನ್ನು ಬೆಂಬಲಿಸಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ನವೆಂಬರ್ 25ರಂದು ರಾಜಸ್ಥಾನದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com