ಸಿಲ್ಕ್ಯಾರಾ ಸುರಂಗ ಕುಸಿತ: ಸಂತ್ರಸ್ತರ ರಕ್ಷಣಾ ಕಾರ್ಯ ಅಂತಿಮ ಹಂತಕ್ಕೆ, ಚಿಕಿತ್ಸೆಗೆ ವಿಶೇಷ ಆಸ್ಪತ್ರೆ ಸಜ್ಜು!

ಉತ್ತರಖಂಡದ (Uttarakhand) ಉತ್ತರಕಾಶಿಯ (Uttarkashi) ಸಿಲ್ಕ್ಯಾರಾ ಸುರಂಗದಲ್ಲಿ (Tunnel) ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಿರ್ಣಾಯಕ ಹಂತ ತಲುಪಿದ್ದು, ಸುರಂಗದಲ್ಲಿ ಸಿಲುಕಿರುವ ಸಿಬ್ಬಂದಿಗಳ ಬಳಿಗೆ ರಕ್ಷಣಾ ತಂಡ ತಲುಪಿದೆ.
ಕುಸಿತಗೊಂಡ ಸ್ಥಳ ತಲುಪಿದ ರಕ್ಷಣಾ ತಂಡ
ಕುಸಿತಗೊಂಡ ಸ್ಥಳ ತಲುಪಿದ ರಕ್ಷಣಾ ತಂಡ

ಡೆಹ್ರಾಡೂನ್: ಉತ್ತರಖಂಡದ (Uttarakhand) ಉತ್ತರಕಾಶಿಯ (Uttarkashi) ಸಿಲ್ಕ್ಯಾರಾ ಸುರಂಗದಲ್ಲಿ (Tunnel) ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಿರ್ಣಾಯಕ ಹಂತ ತಲುಪಿದ್ದು, ಸುರಂಗದಲ್ಲಿ ಸಿಲುಕಿರುವ ಸಿಬ್ಬಂದಿಗಳ ಬಳಿಗೆ ರಕ್ಷಣಾ ತಂಡ ತಲುಪಿದೆ.

ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಸತತ 11ನೇ ದಿನವು ಮುಂದುವರೆದಿದ್ದು, ಸುರಂಗ ಕುಸಿದ ಪರಿಣಾಮ ಒಳಗೆ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯ ಅಂತಿಮ ಹಂತ ತಲುಪಿದೆ. ಕೇಂದ್ರ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್‌) ಸಿಬ್ಬಂದಿ ಸುರಂಗದೊಳಗೆ ಪ್ರವೇಶಿಸಿದ್ದು, ಯಾವುದೇ ಕ್ಷಣದಲ್ಲಿ ಸಿಬ್ಬಂದಿಗಳ ರಕ್ಷಣೆ ಮಾಡುವ ಸಾಧ್ಯತೆ ಇದೆ. 

ಕೇಂದ್ರ ಸರ್ಕಾರದ ಚಾರ್‌ಧಾಮ್ ಸರ್ವಋತು ರಸ್ತೆ ಯೋಜನೆಯಡಿ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾದಲ್ಲಿ ನಿರ್ಮಿಸುತ್ತಿರುವ ಸುರಂಗದ ಕೆಲಭಾಗಗಳು ಕಳೆದ ಶನಿವಾರ (ನ.12) ಕುಸಿದು, 41 ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಹೊರತರಲು ಈಗಾಗಲೇ 45 ಮೀಟರ್‌ ರಂಧ್ರ ಕೊರೆಯಲಾಗಿದ್ದು, 800 ಎಂಎಂ ಪೈಪ್ ನ ಮೂಲಕ ರಕ್ಷಣಾ ತಂಡ ಸಂತ್ರಸ್ತರು ಸಿಲುಕಿರುವ ಸ್ಥಳಕ್ಕೆ ತಲುಪಿದೆ. 

ಈ ಬಗ್ಗೆ ಮಾಹಿತಿ ನೀಡಿರುವ ಕಾರ್ಯಾಚರಣೆಗೆ ನಿಯೋಜಿಸಲಾದ ವಿಶೇಷ ಅಧಿಕಾರಿ ಭಾಸ್ಕರ್ ಖುಲ್ಬೆ ಮಾಹಿತಿ ನೀಡಿದ್ದು, "ನಾವು ಇನ್ನೂ ಆರು ಮೀಟರ್‌ಗಳಷ್ಟು ಮುನ್ನಡೆಯಲು ಸಾಧ್ಯವಾಯಿತು ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಮುಂದಿನ ಎರಡು ಗಂಟೆಗಳಲ್ಲಿ, ನಾವು ಮುಂದಿನ ಹಂತಕ್ಕೆ ತಯಾರಿ ನಡೆಸಿದಾಗ, ನಾವು ಉಳಿದಿರುವ ಕೆಲಸವನ್ನು (ಮುಗಿಸಲು) ಸಾಧ್ಯವಾಗುತ್ತದೆ ಎಂದು ನಿರೀಕ್ಷಿಸಲಾಗಿದೆ" ಎಂದು ಹೇಳಿದರು.

ಕಾರ್ಮಿಕರ ಚಿಕಿತ್ಸೆಗೆ ವಿಶೇಷ ಆಸ್ಪತ್ರೆ ಸಜ್ಜು!
ಸಿಲುಕಿರುವ ಕಾರ್ಮಿಕರನ್ನು ಹೊರಗೆ ಕರೆತಂದ ತಕ್ಷಣ ಚಿಕಿತ್ಸೆ ನೀಡಲು ಚಿನ್ಯಾಲಿಸೌರ್‌ನ ಸಮುದಾಯ ಆರೋಗ್ಯ ಕೇಂದ್ರದಲ್ಲಿ 41 ಹಾಸಿಗೆಗಳ ಆಸ್ಪತ್ರೆಯನ್ನು ಸಿದ್ಧಪಡಿಸಲಾಗಿದೆ. ಅವರಿಗೆ ಸೂಕ್ತ ಆಹಾರ ಒದಗಿಸಲಾಗಿದ್ದು, ರಕ್ಷಣೆಯ ಬಳಿಕ ಅವರ ಆರೈಕೆಗಾಗಿ 15 ವೈದ್ಯರ ತಂಡವನ್ನು ನಿಯೋಜಿಸಲಾಗಿದೆ. ತಕ್ಷಣದ ವೈದ್ಯಕೀಯ ಆರೈಕೆಗಾಗಿ ಎಂಟು ಹಾಸಿಗೆಗಳನ್ನು ಒಳಗೊಂಡಿರುವ ತಾತ್ಕಾಲಿಕ ಆಸ್ಪತ್ರೆಯನ್ನು ಸಹ ಸ್ಥಳದಲ್ಲಿ ಸ್ಥಾಪಿಸಲಾಗಿದೆ. ಹಲವಾರು ಅಂಬುಲೆನ್ಸ್‌ಗಳು ಮತ್ತು ಹೆಲಿಕಾಪ್ಟರ್‌ನ್ನು ಸರ್ವಸನ್ನದ್ದ ಸ್ಥಿತಿಯಲ್ಲಿ ಸ್ಥಳದಲ್ಲಿ ಇರಿಸಲಾಗಿದೆ. ಅಲ್ಲದೇ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳು ಹಾಗೂ ಏಮ್ಸ್, ಋಷಿಕೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಕ್ಷಣಾ ಕಾರ್ಯಾಚರಣೆಯ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com