ಹೈದರಾಬಾದ್: ಸಚಿವ ಜಮೀರ್ ಅಹ್ಮದ್ ವಾಸ್ತವ್ಯ ಹೂಡಿದ್ದ ಹೋಟೆಲ್ ಮೇಲೆ ಪೊಲೀಸರ ದಾಳಿ
ಹೈದರಾಬಾದ್: ಸಚಿವ ಜಮೀರ್ ಅಹ್ಮದ್ ಖಾನ್ ವಾಸ್ತವ್ಯವಿದ್ದ ಹೋಟೆಲ್ ಮೇಲೆ ತಡರಾತ್ರಿ ಹೈದರಾಬಾದ್ ಪೊಲೀಸರು ದಾಳಿ ನಡೆಸಿದ್ದಾರೆ. ಜಮೀರ್ ಅಹ್ಮದ್ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಹೈದರಾಬಾದ್ ನ ಪಾರ್ಕ್ ಹಟ್ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು.
ತೆಲಂಗಾಣದಲ್ಲಿ ವಿಧಾನಸಬೆ ಚುನಾವಣೆರಂಗೇರಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಕರ್ನಾಟಕದ ನಾಯಕರು ಸಹ ತೆರಳಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಸಹ ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್ ಮಾಡುತ್ತಿದ್ದಾರೆ.
ಜಮೀರ್ ಅಹಮ್ಮದ್ ಖಾನ್ ಉಳಿದುಕೊಂಡಿದ್ದ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ಮೇಲೆ ನಿನ್ನೆ ತಡರಾತ್ರಿ ದಾಳಿಯಾಗಿದೆ. ಚುನಾವಣೆಗೆ ಅಕ್ರಮ ಹಣ ವರ್ಗಾವಣೆ ಶಂಕೆ ಮೇರೆ ಪೊಲೀಸರು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ.
ಇನ್ನು ಈ ಬಗ್ಗೆ ಜಮೀರ್ ಅಹಮ್ಮದ್ ಖಾನ್ ಸಾಮಾಜಿ ಜಾಲತಾಣಗಳಲ್ಲಿ ಸ್ಪಷ್ಟನೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಉಳಿದುಕೊಂಡಿರುವ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆದ್ರೆ, ಅವರಿಗೆ ಏನು ಸಿಕ್ಕಿಲ್ಲ.
ತೆಲಂಗಾಣದಲ್ಲಿಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಮತ್ತು ರಾಜ್ಯದ ಬಿಆರ್‌ಎಸ್ ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ. ಇದು ನಮ್ಮನ್ನು ಹೆದರಿಸಿ ಹಿಂದಕ್ಕೆ ಕಳುಹಿಸುವ ತಂತ್ರವಾಗಿದೆ. ಆದರೆ ನಾವು ಇದಕ್ಕೆ ಹೆದರುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ