ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಹತ್ಯೆ ಮಾಡುವ ಭಾರತದ ಸಂಚು ವಿಫಲಗೊಳಿಸಿದ ಅಮೆರಿಕಾ: ವರದಿ

ಖಲಿಸ್ತಾನಿ ಭಯೋತ್ಪಾದಕ ಮತ್ತು ನಿಷೇಧಿತ ನಿಷೇಧಿತ ಸಿಖ್ಸ್ ಫಾರ್ ಜಸ್ಟೀಸ್ ಸಂಸ್ಥಾಪಕ ಗುರುಪತ್‌ವಂತ್ ಸಿಂಗ್ ಪನ್ನುನ್‌ ನನ್ನು ತನ್ನ ನೆಲದಲ್ಲಿ ಹೊಡೆದುರುಳಿಸುವ ಭಾರತದ ಯತ್ನವನ್ನು ಯುಎಸ್ ವಿಫಲಗೊಳಿಸಿದೆ ಎಂದು ಮಾಧ್ಯಮ ವರದಿಯೊಂದು ವರದಿ ಮಾಡಿತ್ತು,
ಗುರುಪತ್‌ವಂತ್ ಸಿಂಗ್ ಪನ್ನುನ್‌
ಗುರುಪತ್‌ವಂತ್ ಸಿಂಗ್ ಪನ್ನುನ್‌
Updated on

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಮತ್ತು ನಿಷೇಧಿತ ನಿಷೇಧಿತ ಸಿಖ್ಸ್ ಫಾರ್ ಜಸ್ಟೀಸ್ ಸಂಸ್ಥಾಪಕ ಗುರುಪತ್‌ವಂತ್ ಸಿಂಗ್ ಪನ್ನುನ್‌ ನನ್ನು ತನ್ನ ನೆಲದಲ್ಲಿ ಹೊಡೆದುರುಳಿಸುವ ಭಾರತದ ಯತ್ನವನ್ನು ಯುಎಸ್ ವಿಫಲಗೊಳಿಸಿದೆ ಎಂದು ಮಾಧ್ಯಮ ವರದಿಯೊಂದು ವರದಿ ಮಾಡಿತ್ತು, ಇದಾದ ಕೆಲವೇ ಗಂಟೆಗಳ ನಂತರ, ಭಾರತವು ಅಮೆರಿಕಾ ವರದಿಯನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ವಿದೇಶಾಂಗ ಕಚೇರಿ ಹೇಳಿದೆ.

ಖಲಿಸ್ತಾನಿ ಉಗ್ರ, ಕೆನಡಾ, ಅಮೆರಿಕ, ಬ್ರಿಟನ್‌ ಸೇರಿ ಹಲವು ದೇಶಗಳಲ್ಲಿ ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಹತ್ಯೆಗೆ ಅಮೆರಿಕದಲ್ಲಿ ಸಂಚು ರೂಪಿಸಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಹರ್ದೀಪ್‌ ಸಿಂಗ್‌ ನಿಜ್ಜರ್‌ ಸೇರಿ ಹಲವು ಖಲಿಸ್ತಾನಿ ಉಗ್ರರು ಹತ್ಯೆಗೀಡಾಗಿದ್ದು, ಇದೇ ರೀತಿ ಗುರುಪತ್ವಂತ್‌ ಸಿಂಗ್‌ ಪನ್ನುನ್‌ನನ್ನೂ ಹತ್ಯೆ ಮಾಡಲು, ಅದರಲ್ಲೂ ಅಮೆರಿಕದಲ್ಲಿಯೇ ಆತನನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಅಮೆರಿಕ ಮಾಹಿತಿ ನೀಡಿದೆ. ಇದರ ಬೆನ್ನಲ್ಲೇ, ಸಂಚು ರೂಪಿಸಿರುವ ಕುರಿತು ತನಿಖೆ ನಡೆಸಲಾಗುವುದು ಎಂದು ಭಾರತ ಪ್ರತಿಕ್ರಿಯಿಸಿದೆ.

ಇತ್ತೀಚೆಗೆ ನಡೆದ ಭಾರತ-ಅಮೆರಿಕ ಭದ್ರತಾ ಸಹಕಾರ ಸಭೆಯಲ್ಲಿ ಅಮೆರಿಕ ಮಾಹಿತಿ ನೀಡಿದೆ. ಅಪರಾಧಿಗಳು, ಉಗ್ರರು, ಶಾರ್ಪ್‌ಶೂಟರ್‌ಗಳು ಸೇರಿ ಹಲವರ ಮಧ್ಯೆಯೇ ನಡೆದ ಮಾತುಕತೆಯ ಮಾಹಿತಿ ಆಧರಿಸಿ ಅಮೆರಿಕ ಮಾಹಿತಿ ನೀಡಿದೆ. ಗುರುಪತ್ವಂತ್‌ ಸಿಂಗ್‌ ಪನ್ನುನ್ ಭಾರತ ಹಾಗೂ ಅಮೆರಿಕಕ್ಕೆ ಬೇಕಾಗಿರುವ ಉಗ್ರನಾಗಿರುವ ಕಾರಣ ಸಂಚಿನ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ಮಾಹಿತಿ ನೀಡಿದ್ದಾರೆ. ಗುಪ್ತಚರ ಇಲಾಖೆಯೂ ಈ ಕುರಿತು ಅಲರ್ಟ್‌ ಆಗಿದೆ ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದಷ್ಟೇ ಏರ್‌ ಇಂಡಿಯಾ ವಿಮಾನಗಳನ್ನು ಸ್ಫೋಟಿಸುವುದಾಗಿ ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಬೆದರಿಕೆ ಹಾಕಿದ್ದ. ನವೆಂಬರ್‌ 4ರಂದು ಗುರುಪತ್ವಂತ್‌ ಸಿಂಗ್‌ ಪನ್ನುನ್‌ ವಿಡಿಯೊ ಬಿಟ್ಟಿದ್ದು, ನವೆಂಬರ್‌ 19ರಂದು ಸಿಖ್ಖರು ಏರ್‌ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಸಬಾರದು.‌ ಅಂದು ಏರ್‌ ಇಂಡಿಯಾ ವಿಮಾನಗಳನ್ನು ಸ್ಫೋಟಿಸಲಾಗುವುದು ಎಂದು ಹೇಳಿದ್ದ.

ನವೆಂಬರ್‌ 19 ಇಂದಿರಾ ಗಾಂಧಿ ಜನ್ಮದಿನವಾದ ಕಾರಣ ಅಂದೇ ಏರ್‌ ಇಂಡಿಯಾ ವಿಮಾನಗಳನ್ನು ಸ್ಫೋಟಿಸಲಾಗುವುದು ಎಂದಿದ್ದ. ಅಮೃತಸರದ ಸ್ವರ್ಣಮಂದಿರ ಹೊಕ್ಕಿದ್ದ ಉಗ್ರರ ವಿರುದ್ಧ ಇಂದಿರಾ ಗಾಂಧಿ ಅವರು ಆಪರೇಷನ್‌ ಬ್ಲ್ಯೂ ಸ್ಟಾರ್‌ಗೆ ಆದೇಶ ಮಾಡಿದ ಬಳಿಕ ಅವರು 1984ರಲ್ಲಿ ಹತ್ಯೆಗೀಡಾದರು. ಈಗ ಅವರ ಜನ್ಮದಿನದಂದೇ ಏರ್‌ ಇಂಡಿಯಾ ವಿಮಾನ ಸ್ಫೋಟಿಸಲು ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ.

ಈ ವರ್ಷ ಜೂನ್ 18 ರಂದು ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಹತ್ಯೆಗೆ ಭಾರತವನ್ನು ದೂಷಿಸಿದ ನಂತರ, ದ್ವಿಪಕ್ಷೀಯ ಸಂಬಂಧಗಳು ಹಳಸಿತ್ತು, ನಂತರ ಎರಡೂ ಕಡೆಯವರು ತಲಾ ಒಬ್ಬ ರಾಜತಾಂತ್ರಿಕನನ್ನು ಹೊರಹಾಕುವ ಮೂಲಕ ಮತ್ತು ಭಾರತವು ವೀಸಾ ಸೇವೆಗಳನ್ನು ಅಮಾನತುಗೊಳಿಸುವುದರೊಂದಿಗೆ ದ್ವಿಪಕ್ಷೀಯ ಸಂಬಂಧಗಳನ್ನು ಹದಗೆಡಿಸಿತು.

ಭಾರತದಿಂದ ಭಯೋತ್ಪಾದಕ ಎಂದು ಕರೆಯಲಾದ ಪನ್ನುನ್, ಯುಎಸ್ ಮೂಲದ ನಿಷೇಧಿತ ಸಿಖ್ಸ್ ಫಾರ್ ಜಸ್ಟೀಸ್ (ಎಸ್ಎಫ್​ಜಿ) ಗುಂಪಿನ ಸ್ಥಾಪಕರಲ್ಲಿ ಒಬ್ಬ. ಕೆನಡಾದ ಟೊರೊಂಟೊದಲ್ಲಿ ವಾಸಿಸುತ್ತಿದ್ದ ಆತ ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯದಿಂದ ಪದವಿ ಪಡೆದ್ದಾನೆ. ಹರ್ದೀಪ್ ಸಿಂಗ್ ನಿಜ್ಜರ್ ಜತೆ ನಿಕಟ ಸಂಬಂಧ ಹೊಂದಿದ್ದ ಎಂದು ವರದಿಯಾಗಿದೆ, ನಿಜ್ನರ್​ ಹತ್ಯೆಯ ಹಿಂದೆ ಭಾರತ ಸರ್ಕಾರದವಿದೆ ಎಂದು ಕೆನಡಾ ಆರೋಪಿಸಿದ ಬಳಿಕ ಪನ್ನುನ್​ ಭಾರತದ ಹಿಂದೂಗಳಿಗೆ ಬೆದರಿಕೆ ಹಾಕಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com