ಪರ್ತಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ: 4 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ 

ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ದೆಹಲಿಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಪರ್ತಕರ್ತೆ ಸೌಮ್ಯ ವಿಶ್ವನಾಥನ್
ಪರ್ತಕರ್ತೆ ಸೌಮ್ಯ ವಿಶ್ವನಾಥನ್

ನವದೆಹಲಿ: ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ದೆಹಲಿಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

2008 ರಲ್ಲಿ ಟಿವಿ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಅವರನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದ 5 ನೇ ಆರೋಪಿಗೆ 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.
 
ಆರೋಪಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಮಲೀಕ್ ಹಾಗೂ ಅಜಯ್ ಕುಮಾರ್ ಎಂಬ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ನ್ಯಾಯಾಲಯ ಅಪರಾಧಿಗಳಿಗೆ ತಲಾ 1.25 ಲಕ್ಷ ರೂಪಾಯಿ ದಂಡ ವಿಧಿಸಿದೆ. ಐದನೇ ಅಪರಾಧಿ ಅಜಯ್ ಸೇಥಿಗೆ ಮೂರು ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 7.25 ಲಕ್ಷ ರೂ ದಂಡ ವಿಧಿಸಲಾಗಿದೆ. 

ಆದಾಗ್ಯೂ, ಅಪರಾಧಿಗಳು ಈಗಾಗಲೇ 14 ವರ್ಷಗಳಿಗಿಂತ ಹೆಚ್ಚು ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ. ಅಪರಾಧಿಗಳಿಗೆ ವಿಧಿಸಲಾದ ಒಟ್ಟು ದಂಡದ ಮೊತ್ತದಲ್ಲಿ 12 ಲಕ್ಷ ರೂ.ಗಳನ್ನು ಸಂತ್ರಸ್ತೆಯ ಕುಟುಂಬಕ್ಕೆ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಶಿಕ್ಷೆಯ ಪ್ರಮಾಣವನ್ನು ಆದೇಶಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು, ಅಪರಾಧವು ಅಪರೂಪದ ಅಪರೂಪದ ಪ್ರಕರಣಗಳ ವರ್ಗಕ್ಕೆ ಬರುವುದಿಲ್ಲ ಹಾಗಾಗಿ ಮರಣದಂಡನೆಗೆ ಕೋರಿಕೆಯನ್ನು ತಿರಸ್ಕರಿಸಲಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com