ಒಡಿಶಾ; ಮನೆ ಮುಂದೆ ನಿಂತಿದ್ದವರ ಮೇಲೆ ಕಚ್ಚಾ ಬಾಂಬ್ ದಾಳಿ, ಇಬ್ಬರಿಗೆ ಗಾಯ

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆಸಿದ ಕಚ್ಚಾ ಬಾಂಬ್‌ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕಲ್ಲಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪುರ ಗ್ರಾಮದಲ್ಲಿ ಶನಿವಾರ ನಿರಂಜನ್ ದಾಸ್ (27) ಮತ್ತು ಶ್ರೀನಿವಾಸ್ ದಾಸ್ (25) ತಮ್ಮ ಮನೆಯ ವರಾಂಡಾದಲ್ಲಿ ನಿಂತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬರ್ಹಾಂಪುರ: ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆಸಿದ ಕಚ್ಚಾ ಬಾಂಬ್‌ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಕಲ್ಲಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪುರ ಗ್ರಾಮದಲ್ಲಿ ಶನಿವಾರ ನಿರಂಜನ್ ದಾಸ್ (27) ಮತ್ತು ಶ್ರೀನಿವಾಸ್ ದಾಸ್ (25) ತಮ್ಮ ಮನೆಯ ವರಾಂಡಾದಲ್ಲಿ ನಿಂತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಈ ಘಟನೆಯು ಎರಡು ಗುಂಪುಗಳ ನಡುವಿನ ದೀರ್ಘಕಾಲದ ಹಳೆ ವೈಷಮ್ಯವೇ ಕಾರಣವಾಗಿದ್ದು, ಇದು ಆಗಾಗ್ಗೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾಗುತ್ತದೆ. ವಿಚಾರಣೆಗಾಗಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಲ್ಲಿಕೋಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಗನ್ನಾಥ್ ಮಲ್ಲಿಕ್ ತಿಳಿಸಿದ್ದಾರೆ.

ಘಟನೆಯ ಹಿಂದಿರುವವರನ್ನು ನಾವು ಗುರುತಿಸಿದ್ದು, ಅವರ ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಗ್ರಾಮದಲ್ಲಿ ಶೋಧ ನಡೆಸಿದಾಗ ಕಚ್ಚಾ ಬಾಂಬ್‌ಗಳನ್ನು ತಯಾರಿಸಲು ಬಳಸುವ ಸ್ಫೋಟಕಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದ್ದರೂ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದರು.

'ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯಲು ಗ್ರಾಮದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ' ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com