
ನವದೆಹಲಿ: ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ಹೆಸರನ್ನು 'ಆಯುಷ್ಮಾನ್ ಆರೋಗ್ಯ ಮಂದಿರ' ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಮರುನಾಮಕರಣ ಪ್ರಕ್ರಿಯೆಯನ್ನು ಜಾರಿಗೆ ತರಲು ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರವೊಂದನ್ನು ಕಳುಹಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ಪೋರ್ಟಲ್‌ನಲ್ಲಿ ಮರುನಾಮಕರಣ ಮಾಡಲಾದ ಪ್ರಾಥಮಿಕ ಆರೋಗ್ಯ ಸೌಲಭ್ಯಗಳ ಛಾಯಾಚಿತ್ರಗಳನ್ನು ಅಪ್‌ಲೋಡ್ ಮಾಡಲು ರಾಜ್ಯಗಳಿಗೆ ಸೂಚಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಮರುನಾಮಕರಣ ಮಾಡಲಾದ ಭಾರತ್ ಆರೋಗ್ಯ, ಸ್ವಾಸ್ಥ್ಯ ಕೇಂದ್ರಗಳು 'ಆರೋಗ್ಯಂ ಪರ್ಮಂ ಧನಮ್'. - ಎಂಬ ಟ್ಯಾಗ್ ಲೈನ್ ಕೂಡಾ ಹೊಂದಿವೆ.
Advertisement