

ನವದೆಹಲಿ: ದೇಶದಲ್ಲಿಂದು 31 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದ್ದು, 249 ಸಕ್ರಿಯ ಪ್ರಕರಣಗಳು ಇವೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಈವರೆಗೆ ದೇಶದಲ್ಲಿ 5,33,298 ಮಂದಿ ಕೋವಿಡ್ನಿಂದ ಸಾವಿಗೀಡಾಗಿದ್ದಾರೆ. ದೇಶದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.50 ಕೋಟಿ (4,50,01,764) ಆಗಿದೆ.
ಆರೋಗ್ಯ ಸಚಿವಾಲಯದ ವೆಬ್ಸೈಟ್ ಪ್ರಕಾರ, ಕೋವಿಡ್ನಿಂದ ಚೇತರಿಸಿಕೊಂಡವರ ಸಂಖ್ಯೆ 4,44,68,217ಕ್ಕೆ ಏರಿಕೆಯಾಗಿದೆ ಮತ್ತು ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81 ರಷ್ಟಿದೆ.
ಮರಣ ಪ್ರಮಾಣ ಶೇ 1.19 ರಷ್ಟಿದೆ. ದೇಶದಲ್ಲಿ ಇದುವರೆಗೆ 220.67 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.