26/11ರ ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ: ದಾಳಿಯಲ್ಲಿ ಮಡಿದವರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರ ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷಗಳು ಕಳೆದಿದ್ದು, ದಾಳಿಯಲ್ಲಿ ಮಡಿದವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಮರಿಸಿದ್ದು, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಪ್ರಧಾನಿ ಮೋದಿ.
ಪ್ರಧಾನಿ ಮೋದಿ.

ನವದೆಹಲಿ: ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರ ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷಗಳು ಕಳೆದಿದ್ದು, ದಾಳಿಯಲ್ಲಿ ಮಡಿದವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಮರಿಸಿದ್ದು, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ತಮ್ಮ 107ನೇ ಆವೃತ್ತಿಯ ಮನ್ ಕಿ ಬಾತ್'ನಲ್ಲಿ ಮಾತನಾಡಿದ ಅವರು, ಮುಂಬೈ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಜನರನ್ನು ರಕ್ಷಿಸುವ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ವೀರ ಯೋಧರನ್ನು ಇಂದು ದೇಶ ಸ್ಮರಿಸುತ್ತಿದೆ. ಆ ಎಲ್ಲಾ ವೀರ ಯೋಧರಿಗೆ ಗೌರವ ಸಲ್ಲಿಸುತ್ತೇನೆ ಎಂದು ಹೇಳಿದರು.

2008ರ ನವೆಂಬರ್ 26 ರಂದು ನಡೆದ ಉಗ್ರರ ದಾಳಿಯಿಂದಾದ ಆಳವಾದ ಗಾಯವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. 15 ವರ್ಷಗಳ ಹಿಂದೆ ಭಯನಕ ದಾಳಿ ನಡೆದಿದ್ದು. ಉಗ್ರರು ಮುಂಬೈ ಮಾತ್ರವಲ್ಲದೇ ಇಡೀ ದೇಶ, ವಿಶ್ವವನ್ನು ಬೆಚ್ಚಿಬೀಳುವಂತೆ ಮಾಡಿದ್ದರು. ಭಾರತವು ಈ ಘಟನೆಯಿಂದ ಚೇತರಿಸಿಕೊಳ್ಳುವ ಸಾಮರ್ಥ್ಯವನ್ನು ಬಳಸಿತು. ಈಗ ಭಯೋತ್ಪಾದನೆಯನ್ನು ಹತ್ತಿಕ್ಕಲು ಅದೇ ಧೈರ್ಯವನ್ನು ಬಳಸುತ್ತಿದ್ದೇವೆಂದು ತಿಳಿಸಿದರು.

ಪಾಕಿಸ್ತಾನದ ಕರಾಚಿಯಿಂದ ಸಮುದ್ರ ಮಾರ್ಗದ ಮೂಲಕ ಬಂದಿದ್ದ 10 ಮಂದಿ ಲಷ್ಕರ್-ಇ-ತೊಯ್ಬಾ ಉಗ್ರರು 2008ರ ನ.26ರಂದು ಮುಂಬೈನ ತಾಜ್ ಹೋಟೆಲ್, ಶಿವಾಜಿ ಟರ್ಮಿನಲ್ ಸೇರಿದಂತೆ 12 ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ವಿದೇಶಿಗರೂ ಸೇರಿದಂತೆ 174 ಮಂದಿ ನಾಗರೀಕರು ಸಾವನ್ನಪ್ಪಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com