ಹರ್ಯಾಣ: ಹರ್ಯಾಣದ ಸೋನಿಪತ್ ನಲ್ಲಿ ಭೂಕಂಪ ಸಂಭವಿಸಿದ್ದು 3.0 ರಷ್ಟು ತೀವ್ರತೆ ದಾಖಲಾಗಿದೆ. ಭಾನುವಾರ ಮುಂಜಾನೆ 4 ರ ವೇಳೆಗೆ ಭೂಕಂಪದ ಅನುಭವ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ.
"ಇಂದು ಮುಂಜಾನೆ 4 ಗಂಟೆಗೆ ಹರಿಯಾಣದ ಸೋನಿಪತ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ" ಎಂದು ಎನ್‌ಸಿಎಸ್ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಇದಕ್ಕೂ ಮುನ್ನ ನವೆಂಬರ್ 20 ರಂದು ಮಹಾರಾಷ್ಟ್ರದ ಹಿಂಗೋಲಿಯಲ್ಲಿ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿತ್ತು ಎಂದು ಎನ್‌ಸಿಎಸ್ ಮಾಹಿತಿ ನೀಡಿದೆ.
Advertisement