ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸಹಪಾಠಿಗೆ 108 ಬಾರಿ ಕಾಂಪಾಸ್ ನಿಂದ ಇರಿದ  4ನೇ ತರಗತಿ ವಿದ್ಯಾರ್ಥಿಗಳು!

ಮಧ್ಯಪ್ರದೇಶದ ಇಂದೋರ್ ನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಮೂವರು ಸಹಪಾಠಿಗಳು ಜ್ಯಾಮಿಟ್ರಿ ಕಂಪಾಸ್‌ನಿಂದ 108 ಬಾರಿ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಮೂವರು ಸಹಪಾಠಿಗಳು ಜ್ಯಾಮಿಟ್ರಿ ಕಂಪಾಸ್‌ನಿಂದ 108 ಬಾರಿ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಶಾಲೆಯಲ್ಲಿ ವಿದ್ಯಾರ್ಥಿಗಳ ಮಧ್ಯೆಯೇ ಸಣ್ಣ ಗಲಾಟೆ ನಡೆದಿದೆ. ಇದೇ ಕಾರಣಕ್ಕಾಗಿ 4ನೇ ತರಗತಿಯ ವಿದ್ಯಾರ್ಥಿಯೊಬ್ಬನಿಗೆ ಕೆಲ ವಿದ್ಯಾರ್ಥಿಗಳು ತ್ರಿಜ್ಯದಿಂದ ನೂರಕ್ಕೂ ಅಧಿಕ ಬಾರಿ ಇರಿದಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕನು ಪ್ರಾಣಾಪಾಯದಿಂದ ಪಾರಾಗಿದ್ದರೂ ಮೈತುಂಬ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ತ್ರಿಜ್ಯದಿಂದ ಹಲವು ಬಾರಿ ಹಲ್ಲೆಗೊಳಗಾದ ವಿದ್ಯಾರ್ಥಿಯ ಪೋಷಕರು ಶಾಲೆಯ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಶಾಲೆ ಆಡಳಿತ ಮಂಡಳಿ, ವಿದ್ಯಾರ್ಥಿಗಳ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಲು ಮುಂದಾಗಿದ್ದರು. ಇದಾದ ಬಳಿಕ ಶಾಲೆಯ ಪ್ರಾಂಶುಪಾಲರಾದ ರಮಾ ಶರ್ಮಾ ಅವರು ವಿದ್ಯಾರ್ಥಿಯ ಪೋಷಕರನ್ನು ಮನವೊಲಿಸಿದ್ದು, ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ. ಇನ್ನು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಇಬ್ಬರು ವಿದ್ಯಾರ್ಥಿಗಳನ್ನು ಶಾಲೆಯಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಆರಾಧ್ಯ ಎಂದು ಗುರುತಿಸಲಾಗಿದೆ. ಹಲ್ಲೆ ಮಾಡಿದ ವಿದ್ಯಾರ್ಥಿಗಳು ನಿತ್ಯ ಶಾಲೆಗೆ ಬರುತ್ತಾರೆ. ಆದರೆ, ಅವರು ಪ್ರತಿ ದಿನ ಯಾವುದಾದರೊಂದು ಗಲಾಟೆಗೆ ಕಾರಣರಾಗುತ್ತಿದ್ದರು ಎಂದು ತಿಳಿದುಬಂದಿದೆ.

Related Stories

No stories found.

Advertisement

X
Kannada Prabha
www.kannadaprabha.com