ದೆಹಲಿ: ಖಲಿಸ್ತಾನಿ ಉಗ್ರ ಅರ್ಶ್‌ ದಲ್ಲಾ ಗ್ಯಾಂಗ್‌ನ ಇಬ್ಬರು ಶೂಟರ್‌ಗಳ ಬಂಧನ

ಕೆನಡಾದಲ್ಲಿ ಕುಳಿತು ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಖಲಿಸ್ತಾನಿ ಉಗ್ರ ಅರ್ಶ್‌ ದಲ್ಲಾ ಗ್ಯಾಂಗ್‌ನ ಇಬ್ಬರು ಶೂಟರ್‌ಗಳನ್ನು ದೆಹಲಿ ಪೊಲೀಸರು ತಡರಾತ್ರಿ ಶೂಟೌಟ್ ಮಾಡಿ ಬಂಧಿಸಿದ್ದಾರೆ.
ಖಲಿಸ್ತಾನಿ ಉಗ್ರ ಅರ್ಶ್‌ ದಲ್ಲಾ ಗ್ಯಾಂಗ್‌ನ ಇಬ್ಬರು ಶೂಟರ್‌ಗಳ ಬಂಧನ
ಖಲಿಸ್ತಾನಿ ಉಗ್ರ ಅರ್ಶ್‌ ದಲ್ಲಾ ಗ್ಯಾಂಗ್‌ನ ಇಬ್ಬರು ಶೂಟರ್‌ಗಳ ಬಂಧನ

ನವದೆಹಲಿ: ಕೆನಡಾದಲ್ಲಿ ಕುಳಿತು ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಖಲಿಸ್ತಾನಿ ಉಗ್ರ ಅರ್ಶ್‌ ದಲ್ಲಾ ಗ್ಯಾಂಗ್‌ನ ಇಬ್ಬರು ಶೂಟರ್‌ಗಳನ್ನು ದೆಹಲಿ ಪೊಲೀಸರು ತಡರಾತ್ರಿ ಶೂಟೌಟ್ ಮಾಡಿ ಬಂಧಿಸಿದ್ದಾರೆ.

ದೇಶ-ವಿದೇಶಗಳಲ್ಲಿ ಭಾರತ ವಿರೋಧಿ ಚಟುವಟಿಕೆಗಳಲ್ಲಿ ನಿರತರಾಗಿರುವ ಖಲಿಸ್ತಾನಿ ಉಗ್ರರನ್ನು (Khalistani Terrorists) ಮಟ್ಟಹಾಕುವಲ್ಲಿ ದೆಹಲಿ ಪೊಲೀಸರು ಮಹತ್ವದ ಮುನ್ನಡೆ ಸಾಧಿಸಿದ್ದು, ಕೆನಡಾ ಖಲಿಸ್ತಾನಿ ಉಗ್ರ ಅರ್ಶ್‌ದೀಪ್‌ ಸಿಂಗ್‌ ದಲ್ಲಾ (ಆರ್ಶ್‌ ದಲ್ಲಾ) ಗ್ಯಾಂಗ್‌ನ (Arsh Dalla Gang) ಇಬ್ಬರು ಶೂಟರ್‌ಗಳನ್ನು ದೆಹಲಿ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಎನ್ಕೌಂಟರ್ ಮಾಡಿ ಗುಂಡು ಹಾರಿಸಿ ಇಬ್ಬರು ಶೂಟರ್‌ಗಳನ್ನು ಬಂಧಿಸಿದ್ದಾರೆ.

ದೆಹಲಿಯ ಮಯೂರ ವಿಹಾರದಲ್ಲಿ ಖಲಿಸ್ತಾನಿ ಉಗ್ರರು ಅಡಗಿದ್ದಾರೆ ಎಂಬ ಕುರಿತು ನಿಖರ ಮಾಹಿತಿ ಪಡೆದ ದೆಹಲಿ ಪೊಲೀಸ್‌ ಇಲಾಖೆಯ ಸೆಷಲ್‌ ಸೆಲ್‌ ವಿಭಾಗದ ಪೊಲೀಸರು ಎನ್‌ಕೌಂಟರ್‌ ಆರಂಭಿಸಿದ್ದಾರೆ. ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ ಪೊಲೀಸರು ಸೋಮವಾರ ಬೆಳಗ್ಗೆ ಇಬ್ಬರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಪರಾರಿಯಾಗಲು ಯತ್ನಿಸಿದ ಶೂಟರ್‌ಗಳ ಕಾಲಿಗೆ ಗುಂಡು ಹಾರಿಸುವ ಮೂಲಕ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ದೆಹಲಿ ಪೊಲೀಸ್‌ ಮೂಲಗಳು ತಿಳಿಸಿವೆ. 

ಪೆರೋಲ್ ಮೇಲೆ ಬಿಡುಗಡೆಯಾಗಿದ್ದ ಆರೋಪಗಳು
ಬಂಧಿತ ಇಬ್ಬರೂ ಶೂಟರ್‌ಗಳು ಪೆರೋಲ್‌ ಮೇಲೆ ಬಿಡುಗಡೆಯಾಗಿ, ಪಂಜಾಬ್‌ನಿಂದ ಪರಾರಿಯಾಗಿದ್ದರು. ಇವರು ಪಂಜಾಬಿ ಗಾಯಕರೊಬ್ಬರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಇವರಿಬ್ಬರೂ ಖಲಿಸ್ತಾನಿ ಉಗ್ರ ಅರ್ಶ್‌ ದಲ್ಲಾ ಗ್ಯಾಂಗ್‌ನ ಶೂಟರ್‌ಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಪಂಜಾಬ್‌ನಲ್ಲಿ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಅರ್ಶ್‌ ದಲ್ಲಾ, 2020ರಲ್ಲಿ ಕೆನಡಾಗೆ ಪರಾರಿಯಾಗಿದ್ದಾನೆ. ಈತನ ವಿರುದ್ಧ ಹಲವು ಕೇಸ್‌ಗಳು ದಾಖಲಾಗಿದ್ದು, ಎನ್‌ಐಎ ಕೂಡ ತನಿಖೆ ನಡೆಸುತ್ತಿದೆ.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com